ಶೋಷಿತರ ಪರ ಬಜೆಟ್; ಕಾಂಗ್ರೆಸ್ ಪ್ರಶಂಸೆ
ಚಿಕ್ಕಮಗಳೂರು: ಶೋಷಿತರ ಪರ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಡಳಿತದ ಫಲ ನೀಡುವ ಬಜೆಟ್ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಹೇಳಿದ್ದಾರೆ.
ಅಡಕೆಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹ ಧನ, ಅಲ್ಪಸಂಖ್ಯಾತ, ಕ್ರೈಸ್ತರ ಸಮುದಾಯದ ಅಭಿವೃದ್ಧಿಗೆ ಅನುದಾನ, ಎಸ್ಎಸ್ಎಲ್ಸಿಯಲ್ಲಿ ಶೇ. 75ಕ್ಕಿಂತ ಮೇಲ್ಪಟ್ಟು ಅಂಕಪಡೆದ ವಿದ್ಯಾರ್ಥಿಗಳಿಗೆ 15 ಸಾವಿರ ರು. ಪ್ರೋತ್ಸಾಹಧನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅನ್ನಭಾಗ್ಯ ಯೋಜನೆ: ಚಿಕ್ಕಮಗಳೂರು ಜಿಲ್ಲೆಗೆ ಈ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆ ನಿರೀಕ್ಷಿಸಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ತರೀಕೆರೆಯಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ತೆರೆಯಲು ಸಿಎಂ ಅವರು ಘೋಷಿಸಿದ್ದಾರೆ ಎಂದರು. ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಬಡವರಿಗೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಹುಷಾರ್, ಎಚ್ಚರಿಕೆ ಎಂಬ ಧಮಕಿ ಹಾಕುವ ಪದಗಳನ್ನು ಬಳಕೆ ಮಾಡಿದ್ದಾರೆ. ಜಾತ್ಯತೀತ ವ್ಯವಸ್ಥೆಯಲ್ಲಿದ್ದು, ಜಾತಿಯನ್ನು ಬೆದರುಗೊಂಬೆಯನ್ನಾಗಿ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಆರೋಗ್ಯಕರ ಟೀಕೆ ಮಾಡಿದರೆ ಕಾಂಗ್ರೆಸ್ ಸ್ವಾಗತ ಮಾಡುತ್ತದೆ ಎಂದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತರನ್ನು ನಾಯಿಗೆ ಹೋಲಿಕೆ ಮಾಡಿದ್ದಾರೆ. ಒಂದು ವರ್ಗವನ್ನು ಕೀಳು ದೃಷ್ಟಿಯಿಂದ ನೋಡುವುದು ಸರಿಯಲ್ಲ. ಅವರು ಸಾರ್ವಜನಿಕರವಾಗಿ ಕ್ಷಮೆ ಕೋರಬೇಕು ಎಂದು ಮನವಿ ಮಾಡಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ನ ಸಮನ್ವಯ ಸಮಿತಿ ಸಭೆ ನಡೆಯಿತು. ಅಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದ್ದು, ಪ್ರಮುಖವಾಗಿ ಒತ್ತುವರಿ ಸಮಸ್ಯೆ, ಅಡಕೆ ಬೆಳೆಗಾರರಿಗೆ ನೀಡುವ ಬಗ್ಗೆ ಚರ್ಚಿಸಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಬೇಡಿಕೆಯ ಮನವರಿಕೆ ಮಾಡಲಾಯಿತು. ವಿಧಾನಸಭಾ ಅಧಿವೇಶನದ ನಂತರ ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್, ಶ್ರೀಧರ್ ಉರಾಳ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

