ಆಂಶಿಕ ಗುತ್ತಿಗೆದಾರಿಕೆಗೆ ಆಗ್ರಹ
ಕ.ಪ್ರ.ವಾರ್ತೆ, ಕಡೂರು, ಜು.14
ಸರ್ಕಾರವು ಅಂಶಿಕ ಗುತ್ತಿಗೆದಾರಿಕೆ ಜಾರಿಗೆ ಮುಂದಾಗಿರುವುದು ಹಾಗು ಅನುಮತಿ ಪಡೆದ ವಿದ್ಯುತ್ ಗತ್ತಿಗೆದಾರರ ಸಮಸ್ಯೆಗಳನ್ನು ಈಡೇರಿಸುವಂತೆ ಮಾಡಿದ ಮನವಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದೇ ಇದ್ದು ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ರಾಜ್ಯ ಸಂಘದ ಸಹಯೋಗದಲ್ಲಿ ವಿದ್ಯುತ್ ಸಚಿವರ ನಿವಾಸದ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕಡೂರು ತಾಲೂಕು ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಂ.ರಮೇಶ್ ಎಚ್ಚರಿಸಿದ್ದಾರೆ.
ತಾಲೂಕು ಸೇರಿದಂತೆ ರಾಜ್ಯದಲ್ಲಿರುವ ವಿದ್ಯುತ್ ಗುತ್ತಿಗೆದಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಮುಖ್ಯ ಇಂಜಿಯನಿಯರುಗಳು ಮಸ್ಯೆಗಳನ್ನು ಬಗೆಹರಿಸಲು ಮನವಿ ಮಾಡಿ ಪ್ರತಿಭಟನೆ ಮಾಡಿದರೂ ಕೂಡ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ರಮೇಶ್, ಸಂಘದ ಸದಸ್ಯರ ಸಭೆ ಕರೆದು ನಮ್ಮ ಬೇಡಿಕೆ ಈಡೇರಿಸಲು ಈಗಾಗಾಲೇ ಮನವಿ ಮಾಡಿದ್ದೇವೆ ಎಂದು ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಹೋರಾಟದ ಎಚ್ಚರಿಕೆ: ಈ ಬಗ್ಗೆ ಕೂಡಲೇ ಇಲಾಖೆಯು ಗಮನಹರಿಸಿ ಕ್ರಮ ಕೈಗೊಂಡು ಗುತ್ತಿಗೆದಾರರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸಂಘದ ಸಹಯೋಗದೊಂದಿಗೆ ವಿದ್ಯುತ್ ಸಚಿವರ ಮನೆ ಮುಂದೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಕಾರ್ಯದರ್ಶಿ ಜಗದೀಶ್, ಫಯಾಜ್, ಸಿ. ಮಹೇಶ್ವರಪ್ಪ, ಲೋಕೇಶ್, ನಾಗರಾಜ್, ಉದಯನ್, ವೇದಮೂರ್ತಿ, ಅಪ್ಪು, ಏಜಾಜ್ ಅಹಮದ್ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

