ಚಿಕ್ಕಮಗಳೂರು

18ಕ್ಕೆ ಪ್ರತಿಭಟನೆ

Published On :

ಚಿಕ್ಕಮಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಮುಗುಳುವಳ್ಳಿ ಗ್ರಾಮದಲ್ಲಿ ನಿಲ್ಲಿಸುವಂತೆ ಒತ್ತಾಯಿಸಿ ಜು. 18 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.  ಚಿಕ್ಕಮಗಳೂರು- ಬೇಲೂರು ರಸ್ತೆಯಲ್ಲಿ ಸಂಚರಿಸುವ ಎಲ್ಲ ವೇಗದೂತ ಬಸ್ಸುಗಳು ಮುಗುಳವಳ್ಳಿ ಗ್ರಾಮದಲ್ಲಿ ಕೋರಿಕೆಯ ಮೇರೆಗೆ ನಿಲ್ಲಿಸಬೇಕೆಂದು ಸಂಸ್ಥೆ ಆದೇಶಿಸಿದೆ. ಆದರೂ ಕೆಲವೊಂದು ಬಸ್ಸುಗಳು ಈ ಗ್ರಾಮದಲ್ಲಿ ನಿಲ್ಲುತ್ತಿಲ್ಲವೆಂದು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎಚ್.ಕೆ.  ಶಶಿಧರ್ ತಿಳಿಸಿದ್ದಾರೆ.  ಈ ಗ್ರಾಮದಲ್ಲಿ ಹಲವಾರು ವಿದ್ಯಾರ್ಥಿಗಳು ಚಿಕ್ಕಮಗಳೂರಿನಲ್ಲಿ ವ್ಯಾಸಂಗಕ್ಕೆ ತೆರಳುತ್ತಾರೆ. ಬಸ್ಸುಗಳನ್ನು ಇಲ್ಲಿ ನಿಲ್ಲಿಸದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ವೇಗದೂತ ಬಸ್ಸುಗಳನ್ನು ಈ ಗ್ರಾಮದಲ್ಲಿ ನಿಲ್ಲಿಸುವಂತೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಬ್ಯಾರವಳ್ಳಿ ಗ್ರಾಪಂ ವಾರ್ಡ್ ಸಭೆ
ಚಿಕ್ಕಮಗಳೂರು: ಬ್ಯಾರವಳ್ಳಿ ಗ್ರಾಪಂ ವ್ಯಾಪ್ತಿಯ ವಾರ್ಡ್ ಸಭೆ ಜು. 17 ರಂದು ಬೆಳಿಗ್ಗೆ 10 ಗಂಟೆಗೆ ನಿಡುಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.  ಮಧ್ಯಾಹ್ನ 2 ರಿಂದ ಕೆಳಮಲ್ಲಂದೂರು  ವಾರ್ಡ್ ಸಭೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 3 ಗಂಟೆಗೆ ಗ್ರಾಪಂ ಸಮುದಾಯಭವನದಲ್ಲಿ ಹಾಗೂ ಜು. 18 ರಂದು ಬೆಳಿಗ್ಗೆ 10 ಗಂಟೆಗೆ ಶಿವಗಂಗೆಯ ವಾರ್ಡ್ ಸಭೆಯು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಬೆಳಿಗ್ಗೆ 11.30ಕ್ಕೆ ಶಿರಗೂರು ವಾರ್ಡ್ ಸಭೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಹಾಗೂ ಮಧ್ಯಾಹ್ನ 2 ಗಂಟೆಗೆ ಮಾಕೋಡು ವಾರ್ಡ್ ಸಭೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. 19 ರಂದು ಬೆಳಿಗ್ಗೆ 11 ಗಂಟೆಗೆ ಬ್ಯಾರವಳ್ಳಿ, ಭಾಗಮನೆ, ಮಾಕೋಡು, ಶಿರಗೂರು, ಬಗನೆ ಹದ್ದಾಳು ಗ್ರಾಮಗಳ ಗ್ರಾಮಸಭೆ ಮಲ್ಲಂದೂರಿನ ಗ್ರಾಪಂ ಕಚೇರಿಯಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.