ಗ್ರಾ.ಪಂ. ಚುನಾವಣೆಗೆ ಅಧಿಸೂಚನೆ
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಿ. ಕಣಬೂರು, ಚಿಕ್ಕಮಗಳೂರಿನ ತೊಗರಿಹಂಕಲ್, ಆಣೂರು, ಕುರುಬರ ಬೂದಿಹಾಳ್, ಕರ್ತಿಕೆರೆ, ಕಡೂರಿನ ಬಿಳುವಾಲ, ನಿಡಗಟ್ಟ, ಮತಿಘಟ್ಟ, ಮೂಡಿಗೆರೆಯ ಬಿ. ಹೊಸಳ್ಳಿ, ಕುಂದೂರು, ಬೆಟ್ಟಗೆರೆ, ಊರುಬಗೆ ಹಾಗೂ ತರೀಕೆರೆಯ ಅಮೃತಾಪುರ, ಚೀರನಹಳ್ಳಿ, ಬೇಲೇನಹಳ್ಳಿ ಸಿದ್ದರಹಳ್ಳಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಆಗಸ್ಟ್ 4 ರಂದು ಚುನಾವಣೆ ನಡೆಯಲಿದೆ. ಚುನಾವಣಾ ಅಧಿಸೂಚನೆ 17 ರಂದು ಹೊರಡಲಿದ್ದು, ನಾಮಪತ್ರ ಸಲ್ಲಿಸಲು ಜು.24 ಕೊನೆಯದಿನ, ಜುಲೈ 25 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಜು. 27 ಕೊನೆಯ ದಿನವಾಗಿದೆ. ಆಗಸ್ಟ್ 4 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಅವಶ್ಯವಿದ್ದಲ್ಲಿ ಮರು ಮತದಾನ ಆಗಸ್ಟ್ 6 ರಂದು ನಡೆಯಲಿದೆ. ಮತ ಎಣಿಕೆ ಆಗಸ್ಟ್ 7 ರಂದು ಆಯಾಯ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜು. 17 ರಿಂದ ಜಾರಿಗೆ ಬರಲಿದೆ. ಆದರೆ, ಇದು ಬರ ಕಾಮಗಾರಿ, ಪ್ರವಾಹ, ಪ್ರಕೃತಿ ವಿಕೋಪ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

