ರೈತರಿಗೆ ಯಶಸ್ವಿನಿ ಯೋಜನೆ ಆಸರೆ
ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದ ರೈತರ ಸಹಕಾರಿಗಳಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ಅನಾರೋಗ್ಯ ಸಂದರ್ಭದಲ್ಲಿ ಯಶಸ್ವಿನಿ ಯೋಜನೆ ಆಸರೆಯಾಗಲಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಎ.ಆರ್. ರಾಜಶೇಖರ್ ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಇಲಾಖೆಯಿಂದ ಆಯೋಜಿಸಿದ್ದ ಯಶಸ್ವಿನಿ ಯೋಜನೆಯ 2013-14ನೇ ಸಾಲಿನ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಶಸ್ವಿನಿ ಯೋಜನೆ ಗ್ರಾಮೀಣ ಪ್ರದೇಶದ ರೈತರಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ಅನಾರೋಗ್ಯ ಸಂದರ್ಭದಲ್ಲಿ ಆರ್ಥಿಕವಾಗಿ ಬಡತನ ರೇಖೆಗಿಂತ ಕಡಿಮೆಯಿರುವ ವರ್ಗಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದರು.
ಈ ಯೋಜನೆ ವಿಶ್ವದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಅನುಷ್ಠಾನವಾಗಿ ಯಶಸ್ವಿಯಾಗಿದೆ. ಈ ಯೋಜನೆಯ ನೋಂದಣಿ ಫೆಬ್ರವರಿ ಮಾಹೆಯಲ್ಲಿ ಪ್ರಾರಂಭವಾಗಬೇಕಿತ್ತು. ಬದಲಾದ ಪರಿಸ್ಥಿತಿಯಿಂದಾಗಿ ಜು. 15 ರಿಂದ ಪ್ರಾರಂಭವಾಗಿ ಅಕ್ಟೋಬರ್ 31 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಚಿಕ್ಕಾನವಂಗಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಿಗಮದ ಅಧ್ಯಕ್ಷ ಶಿವಾನಂದಸ್ವಾಮಿ ಮಾತನಾಡಿ, ಈ ಯೋಜನೆಯ ಫಲ ನೇರವಾಗಿ ರೈತರಿಗೆ ದೊರಕಲು ಸಹಕಾರಿಯಾಗಬೇಕೆಂದರು. ಸಹಕಾರ ಸಂಘಗಳ ಉಪ ನಿಬಂಧಕ ಕೆ.ಎಂ. ಶಿವಕುಮಾರಸ್ವಾಮಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

