ಚಿಕ್ಕಮಗಳೂರು

ನಿರ್ಮಲ ಗ್ರಾಪಂ ನಿರ್ಮಾಣಕ್ಕೆ ಶ್ರಮಿಸಿ

Published On :

ಚಿಕ್ಕಮಗಳೂರು: ಪ್ರಾಮಾಣಿಕ ಕೆಲಸಗಳಿಗೆ ಸಹಕಾರಿಗಳ ಕೊರತೆ ಎಂದಿಗೂ ಇರುವುದಿಲ್ಲವೆಂದು ಜಿಲ್ಲಾ ಪಂಚಾಯಿತಿ ನಿರ್ಮಲ ಭಾರತ ಅಭಿಯಾನದ ಮಾಹಿತಿ ಶಿಕ್ಷಣ ಸಂವಹನ ಸಮಾಲೋಚಕ ಜಿ.ಬಿ. ಪವನ್ ಹೇಳಿದ್ದಾರೆ.
ನಗರಕ್ಕೆ ಸಮೀಪದ ಬೀಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಆವರಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದವತಿಯಿಂದ ಗ್ರಾಮ ಪಂಚಾಯಿತಿಯ ಮಹಿಳೆಯರಿಗೆ ಆಯೋಜಿಸಿದ್ದ ನೀರು ನೈರ್ಮಲ್ಯ  ಕುರಿತ ಗ್ರಾಮೀಣ ಸಹಭಾಗಿತ್ವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಜನರು ಫ್ಯಾಷನ್ ಯುಗಕ್ಕೆ ಹೆಚ್ಚಿನದಾಗಿ ಹೊಂದಿಕೊಂಡು ಸ್ವಚ್ಛತೆಯ ಬಗ್ಗೆ ಗಮನಹರಿಸದೆ ಹೆಚ್ಚಿನ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರಶಸ್ತಿ ಪಡೆಯಿರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 745 ಕುಟುಂಬಗಳಿದ್ದು, ಈಗಾಗಲೇ 530 ಕುಟುಂಬಗಳು ಶೌಚಾಲಯವನ್ನು ಹೊಂದಿವೆ. ಇನ್ನು ಬಾಕಿ ಉಳಿದ 215 ಕುಟುಂಬಗಳಲ್ಲಿ ಶೌಚಾಲಯ ನಿರ್ಮಾಣವಾಗಬೇಕಿದೆ.
ಅವುಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ತಾವೆಲ್ಲರೂ ಪ್ರಯತ್ನಿಸಿ ಗ್ರಾಮ ಪಂಚಾಯಿತಿಯನ್ನು ನಿರ್ಮಲ ಗ್ರಾಮ ಪಂಚಾಯಿತಿಯನ್ನಾಗಿಸಿ ಭಾರತ ಸರ್ಕಾರ ನೀಡುವ ನಿರ್ಮಲ ಗ್ರಾಮಪುರಸ್ಕಾರ ಪ್ರಶಸ್ತಿಯನ್ನು ಪಡೆಯಬೇಕೆಂದು ಸಂಘದ ಸದಸ್ಯರಿಗೆ ಕರೆ ನೀಡಿದರು.
ಧರ್ಮಸ್ಥಳ ಸಂಘದ ಸಂಯೋಜಕ ಅಶೋಕ ಮಾತನಾಡಿ, ಯೋಜನೆಯ ವತಿಯಿಂದ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುವ ಎಲ್ಲಾ ಯೋಜನೆಗಳಿಗೆ ಪೂರ್ಣವಾದ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ  ಒಕ್ಕೂಟದ ಅಧ್ಯಕ್ಷೆ ರತ್ನಮ್ಮ, ಸೇವಾಪ್ರತಿನಿಧಿ ಲತಾ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು. ಸಂಯೋಜಕ ಕೇಶವಮೂರ್ತಿ  ಅವರು ಸ್ವಾಗತಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.