ಸಾಮಾಜಿಕ ಕಳಕಳಿಯೇ ಲಯನ್ಸ್ ಸೇವೆಯ ಉದ್ದೇಶ
ಲಯನ್ಸ್ ಕ್ಲಬ್ ಜಿಲ್ಲಾ ಉಪ ರಾಜ್ಯಪಾಲ ಮಂಜುನಾಥ ಮೂರ್ತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ನರಸಿಂಹರಾಜಪುರ: ಲಯನ್ಸ್ ಕ್ಲಬ್ ಸದಸ್ಯರು ಸಾಮಾಜಿಕ ಕಳಕಳಿಯಿಂದ ಸೇವೆ ಮಾಡುತ್ತಿದ್ದು, ಸಮಾಜಕ್ಕೆ ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಳಕಳಯಿಂದ ಕೊಡುಗೆ ನೀಡುತ್ತಿದ್ದಾರೆ. ಸ್ನೇಹ ಎಂಬುದೇ ಈ ವರ್ಷದ ಲಯನ್ಸ್ ಘೋಷಣೆಯಾಗಿದೆ ಎಂದು ಲಯನ್ಸ್ ಕ್ಲಬ್ ಜಿಲ್ಲಾ ಉಪ ರಾಜ್ಯಪಾಲ ಎಚ್.ಎಸ್. ಮಂಜುನಾಥ ಮೂರ್ತಿ ತಿಳಿಸಿದರು.
ಅವರು ಸೋಮವಾರ ಕೃಷಿ ಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಪದವಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಭೇದವಿಲ್ಲದ ಸೇವೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ 3,118 ಲಯನ್ಸ್ ಸದಸ್ಯರಿದ್ದಾರೆ. ಸೇವೆಯಲ್ಲಿ ಸಣ್ಣ ಅಥವಾ ದೊಡ್ಡ ಎಂಬ ಭೇದ ಇಲ್ಲದೆ ಎಲ್ಲಾ ರೀತಿಯ ಸೇವೆ ಮಾಡುತ್ತ ಬಂದಿದ್ದಾರೆ. ಲಯನ್ಸ್ ಸಂಸ್ಥೆ ಅಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಪದಾಧಿಕಾರಿಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಂಸ್ಥೆ ಯಶಸ್ವಿಯಾಗಲು ಸಾಧ್ಯ ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ನಿರ್ಗಮಿತ ಅಧ್ಯಕ್ಷ ದಕ್ಷಿಣಾಮೂರ್ತಿ ಮಾತನಾಡಿ,ಕಳೆದ ವರ್ಷದಲ್ಲಿ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಉತ್ತಮ ಕಾರ್ಯ ಮಾಡಿದ ತೃಪ್ತಿಯೊಂದಿಗೆ ನಿರ್ಗಮಿಸುತ್ತಿದೇನೆ ಎಂದರು. ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಂ.ಪಿ. ಸನ್ನಿ ಮಾತನಾಡಿ, ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.
ಕಾರ್ಯದರ್ಶಿ ಎನ್. ರವಿಚಂದ್ರ, ಖಜಾಂಚಿಯಾಗಿ ಡಿ. ರಮೇಶ್ ಹಾಗೂ ಇತರೆ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಮಾಜಿ ಜಿಲ್ಲಾ ಉಪರಾಜ್ಯಪಾಲ ಎಚ್.ಜಿ. ವೆಂಕಟೇಶ್, ಲಯನ್ಸ್ ವಲಯ ಅಧ್ಯಕ್ಷ ಕೆ.ಸಿ. ರಮೇಶ್, ಉಮೇಶ್ ಪುದವಾಳ್, ರೀಜನಲ್ ಪರ್ಸನ್ ಡಾ. ಅನಿತಾ ನಟರಾಜ್, ಗೌರ್ನರ್ ಆಫ್ ಲಯನ್ಸ್ ಟಿ. ನಾಗರಾಜ್, ಕೊಪ್ಪ ಸಹ್ಯಾದ್ರಿ ಲಯನ್ಸ್ ಕ್ಲಬ್ ಅಧ್ಯಕ್ಷ ರತ್ನಾಕರ, ಕೊಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ ದಯಾನಂದ ಹೆಗ್ಡೆ, ಶೃಂಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ್, ನ.ರಾ. ಪುರ ಲಯನ್ಸ್ ಸಂಸ್ಥೆ ಕಾರ್ಯದರ್ಶಿ ಎಚ್.ಎಸ್. ರವಿಕುಮಾರ್, ಖಜಾಂಚಿ ಡಾ. ಮಹೇಶ್ ಭಂಡಾರಿ ಉಪಸ್ಥಿತರಿದ್ದರು.
ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಸುಜಿತ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸವಿತಾ ದಕ್ಷಿಣಾ ಮೂರ್ತಿ ಪ್ರಾರ್ಥಿಸಿದರು. ರವಿಕುಮಾರ್ ಸ್ವಾಗತಿಸಿದರು. ಸತ್ಯನಾರಾಯಣಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ರವಿಚಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

