ಚಿಕ್ಕಮಗಳೂರು

ವೈದ್ಯರ ನೇಮಿಸಲು ಒತ್ತಾಯ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಜು.18
ಪಟ್ಟಣದ ಸರ್ಕಾರಿ ಸಾರ್ವಜನಿಕ ಎಂಜಿಎಂ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಟೋ, ವಾಹನ  ಚಾಲಕರು- ಮಾಲೀಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಅಧಿಕವಾಗಿದ್ದು, ನಕ್ಸಲ್ ಬಾಧಿತ ಪ್ರದೇಶವಾಗಿರುವ ತಾಲೂಕು 2 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಹಾಗಾಗಿ ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ತಕ್ಷಣ ನೇಮಿಸಬೇಕು ಎಂದು ಆಗ್ರಹಿಸಿದರು.
ಹೆಚ್ಚುವರಿ ವೈದ್ಯರನ್ನು ನೇಮಿಸಿ: ಜೈಭೀಮ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಯು.ಬಿ. ಮಂಜಯ್ಯ ಮಾತನಾಡಿ, ತಾಲೂಕಾಸ್ಪತ್ರೆ 100 ಹಾಸಿಗೆ ಆಸ್ಪತ್ರೆಯಾಗಿದ್ದು, ಕೇವಲ ಮೂವರು ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ತಾಲೂಕಿನಲ್ಲಿ ಕೇವಲ 5-6 ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರ ಕೂಡಲೇ ಈ ಆಸ್ಪತ್ರೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೂ ವೈದ್ಯರನ್ನು ನೇಮಿಸಬೇಕು. ಮತ್ತು ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿ ಈ ಭಾಗದ ಬಡರೋಗಿಗಳಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.   ನಂತರ ಸರ್ಕಾರಿ ಆಸ್ಪತ್ರೆ ಆವರಣದಿಂದ ತಾಲೂಕು ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.