ಚಿಕ್ಕಮಗಳೂರು

ಬಾಲಕಿಯರ ವಸತಿ ಶಾಲೆಗೆ ಲೋಕಾ ಅಧಿಕಾರಿ ಭೇಟಿ

Published On :

ನರಸಿಂಹರಾಜಪುರ: ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರಸನ್ನ ವಿ ರಾಜು ಮತ್ತು ಸಿಬ್ಬಂದಿಗಳು ಶುಕ್ರವಾರ ಪ್ರವಾಸಿ ಮಂದಿರದ ಸಮೀಪ ಇರುವ ಬಾಲಕಿಯರ ವಸತಿ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದರು.
 ಹಾಸ್ಟಲ್‌ನ ಅಡುಗೆ ಕೋಣೆ ಪರಿಶೀಲನೆ ನಡೆಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ನರಸಿಂಹರಾಜಪುರ ತಾಲೂಕಿನಲ್ಲಿ ಶಿಕ್ಷರ ಕೊರತೆ ಇರುವಾಗ ಶಿಕ್ಷಕರನ್ನು ಬೇರೆ ಇಲಾಖೆಗೆ ಕಳಿಸುವುದು ಬೇಡ ಎಂದು ಹಾಸ್ಟೆಲ್‌ಗೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ಗೆ ಸಲಹೆ ನೀಡಿದರು. ಶಿಕ್ಷಣ ಇಲಾಖೆಯುವ ಅತ್ಯಂತ ಮಹತ್ವದ ಇಲಾಖೆಯಾಗಿದ್ದು ಶಿಕ್ಷಣ ಇಲಾಖೆಯಿಂದ ಬೇರೆ ಇಲಾಖೆಗೆ ವರ್ಗಾವಣೆ ಆಗಿದ್ದರೆ ಅಂತವರನ್ನು ವಾಪಸ್ ಶಿಕ್ಷಣ ಇಲಾಖೆಗೆ ಕರೆಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ದೂರು: ಇದಕ್ಕೂ ಮೊದಲು ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತರು ಸಾರ್ವಜನಿಕರಿಂದ ಅರ್ಜಿ ಸ್ವೀಕಾರ ಮಾಡಿದರು. ಮೆಸ್ಕಾಂ, ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗ ಹಾಗೂ ತಾಲೂಕು ಪಂಚಾಯ್ತಿ ಬಗ್ಗೆ ದೂರುಗಳು ಬಂದಿದ್ದು ಅದನ್ನು ಪರೀಶೀಲನೆ ಮಾಡಿದ ಲೋಕಾಯುಕ್ತರು ಈ ಮೂರು ಇಲಾಖೆಗಳು ಮುಖ್ಯಸ್ಥರನ್ನು ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡರು. ತಾಲೂಕು ಪಂಚಾಯ್ತಿ ವ್ಯವಸ್ಥಾಪಕಿ ಶ್ರೀಮತಿ ಮೀನಾಕ್ಷಮ್ಮ, ಮೆಸ್ಕಾಂ ಎಂಜನಿಯರ್ ಚಂದ್ರಶೇಖರ್ ಹಾಗೂ ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಕಿಶೋರ್, ಮಲ್ಲಪ್ಪ ಅವರಿಗೆ ಸಾರ್ವಜನಿಕರಿಂದ ಬಂದ ದೂರುಗಳು ಬಗ್ಗೆ ತಿಳಿಸಿ ವಿವರಣೆ ಪಡೆದುಕೊಂಡರು. ಮುರಾರ್ಜಿ ಶಾಲಾ ಕಟ್ಟಡಕ್ಕೆ ಭೇಟಿ: ಸೌತಿಕೆರೆ ಸಮೀಪದ ಅಳಲಗೆರೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡಕ್ಕೆ ಬೇಟಿ ಪರಿಶೀಲನೆ ನಡೆಸಿದರು. ಅಲ್ಲಿದ್ದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಕಟ್ಟಡದ ಕಾಮಗಾರಿ ವಿಳಂಬದ ಬಗ್ಗೆ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸಂಬಂಧಪಟ್ಟರೊಂದಿಗೆ ಚರ್ಚೆ ನಡೆಸುವುದಾಗಿ ಪ್ರಸನ್ನ ವಿ.ರಾಜು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.