ಆ.2 ರಂದು ನೌಕರರ ಸಂಘದ ಚುನಾವಣೆ
ಕಡೂರು: ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕಡೂರು ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯು ಆಗಸ್ಟ್ 2 ರಂದು ನಡೆಯಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಚನ್ನಪ್ಪ ಇಂಗ್ಲಳ್ಳಿ ತಿಳಿಸಿದರು.
ಅವರು ಕಡೂರು ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಂಘದ ಆದೇಶದ ಮೇರೆಗೆ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಇದೇ ಜುಲೈ 22 ರಿಂದ 26 ರವರೆಗೆ ನಾಮಪತ್ರ ವಿತರಣೆ ಮತ್ತು ಸಲ್ಲಿಸಬಹುದಾಗಿದೆ. ಆಗಸ್ಟ್ 2ರ ಶುಕ್ರವಾರ ಬೆಳಿಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ಚುನಾವಣೆಯು ಆಯಾ ಇಲಾಖಾ ವ್ಯಾಪ್ತಿಯಲ್ಲಿ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ ಎಂದರು.
ತಾಲೂಕಿನ 26 ಇಲಾಖೆಗಳಿಂದ ಒಟ್ಟು 35 ನಿರ್ದೇಶಕರ ಸ್ಥಾನಕ್ಕೆ ಸದಸ್ಯತ್ವ ಶುಲ್ಕ ಪಾವತಿಸಿದ 2637 ನೌಕರರು ಮತದಾನ ಮಾಡಲಿದ್ದಾರೆ. ಚುನಾವಣೆಯ ಅಧಿಕಾರಿಗಳಾಗಿ ಉಪನ್ಯಾಸಕರಾದ ಸಿ.ಮಹಾಲಿಂಗಯ್ಯ, ಎಂ.ಪಿ. ಗೌವಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ. ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಖಜಾಂಚಿ ಆಯ್ಕೆಗೆ ಆಗಸ್ಟ್ 10 ರಂದು ಚುನಾವಣೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ನೌಕರರಾದ ರಂಗಾಥ್, ಎನ್.ಎಸ್. ಬಸವರಾಜು, ಮಲ್ಲಪ್ಪ, ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ನೌಕರರು, ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

