ಚಿಕ್ಕಮಗಳೂರು

ಯೋಜನೆಗಳು ಸದುಪಯೋಗವಾಗಲಿ

Published On :

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರು ಸದುಪಯೋಗ ಪಡಿಸಿಕೊಳ್ಳುವಂತೆ ದೇವದಾನ ಗ್ರಾಪಂ ಅಧ್ಯಕ್ಷೆ ಲಲಿತಮ್ಮ ಕರೆ ನೀಡಿದ್ದಾರೆ.
 ದೇವದಾನ ಗ್ರಾಪಂ ವ್ಯಾಪ್ತಿಯ ಸಂಗಮೇಶ್ವರ ಪೇಟೆಯ ಕೃಷಿ ಪತ್ತಿನ ಸಹಕಾರ ಸಂಘದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಭಾನುವಾರ ಅಕ್ಕಿ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸವಲತ್ತುಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
 ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಮಾತನಾಡಿ, ಕಾಂಗ್ರೆಸ್ ಚುನಾವಣೆಗೆ ಮುನ್ನ ನೀಡಿದ ಪ್ರಣಾಳಿಕೆಯಂತೆ ಬಿಪಿಎಲ್ ಕಾರ್ಡ್‌ದಾರರಿಗೆ 1 ರು.ಗೆ ಅಕ್ಕಿ ನೀಡುವುದಾಗಿ ತಿಳಿಸಿ, ಇದೀಗ ರಾಜ್ಯಾದ್ಯಂತ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸರ್ಕಾರದ ಯೋಜನೆಯನ್ನು ಪಡೆಯುವುದರ ಜೊತೆಗೆ ಜನರು ಕೆಲಸಕ್ಕೆ ತೆರಳಿ ತಮ್ಮ ಜೀವನದ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.
 ಪಕ್ಷ ನೀಡಿದ ಪ್ರಣಾಳಿಕೆಯನ್ನು ಹಂತಹಂತವಾಗಿ ಜಾರಿಗೆ ತರಲಾಗುವುದು, ರಾಜ್ಯದ ಜನತೆಯ, ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯೇ ಕಾಂಗ್ರೆಸ್ ಸರ್ಕಾರದ ಮುಖ್ಯ ಗುರಿಯಾಗಿದ್ದು, ಜನತೆಯ ನಂಬಿಕೆ ಉಳಿಸಿಕೊಂಡು ಪಕ್ಷ ಆಡಳಿತ ನಡೆಸಲಿದೆ ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷ ಜಯಶೀಲ, ಸದಸ್ಯರಾದ ಗಣೇಶ್, ಮಮತ, ಬಿ.ಎನ್. ಸೋಮೇಶ್, ಎಸ್.ಪೇಟೆ ಸತೀಶ್, ಚಂದ್ರೆಗೌಡ, ದಿನೇಶ್, ಶ್ರೀನಿವಾಸ್, ಸತೀಶ್, ಪಿಂಟು, ಗುರುಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.