ಚಿಕ್ಕಮಗಳೂರು

ರೋಟರಿ ಕ್ಲಬ್ ಪದಾಧಿಕಾರಿಗಳ ಆಯ್ಕೆ

Published On :

ಕ.ಪ್ರ.ವಾರ್ತೆ, ನ.ರಾ.ಪುರ,  ಜು.21
ವ್ಯಕ್ತಿತ್ವ ವಿಕಸನಕ್ಕೆ ರೋಟರಿ ಸಂಸ್ಥೆ ಸಾಧನವಾಗುತ್ತದೆ ಎಂದು ರೋಟರಿ 3180 ರ ಮಾಜಿ ಜಿಲ್ಲಾ ರಾಜ್ಯಪಾಲ ಎ.ಎಸ್.ಎನ್. ಹೆಬ್ಬಾರ್ ತಿಳಿಸಿದರು.
ಕೃಷಿ ಭವನದಲ್ಲಿ ನಡೆದ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಸಂಸ್ಥೆ ಅಂತಾರಾಷ್ಟೀಯ ಮಟ್ಟದಲ್ಲಿ ಕಠಿಣ ಪರಿಸ್ಥಿತಿಯಲ್ಲೂ ಆರ್ಥಿಕ ಹಾಗೂ ನೈತಿಕ ಸಹಾಯ ಮಾಡಿದೆ ಎಂದರು.
ಶಿವಮೊಗ್ಗ ನಾರ್ತ್ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ವಾರಿಜಾ ಜಗದೀಶ್ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಮಹಿಳೆಯರು ಸಂಘಟಿತರಾಗಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರ ನಿಲ್ಲಬೇಕು ಎಂದರು.
ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಜಿ.ಎಚ್. ಸುಂದರೇಶ್ ಹಾಗೂ ಕಾರ್ಯದರ್ಶಿಯಾಗಿ ಜಿ. ದಿವಾಕರ ಪ್ರಮಾಣ ವಚನ ಸ್ವೀಕರಿಸಿದರು. ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಶೀಲಾ ಸುಂದರೇಶ್ ಹಾಗೂ ಕಾರ್ಯದರ್ಶಿಯಾಗಿ ಉಮಾ ಸತ್ಯನಾರಾಯಣಸ್ವಾಮಿ ಅಧಿಕಾರ ಸ್ವೀಕರಿಸಿದರು. ಸಭೆಯ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ 2012-13 ನೇ ಸಾಲಿನ ಅಧ್ಯಕ್ಷ ಎಚ್.ಟಿ. ಧನಂಜಯ ವಹಿಸಿದ್ದರು.
ಡಾ.ಜಿ.ಸಿ. ಶರತ್, ಪಿ.ಜೆ. ವರ್ಗೀಸ್, ಎ.ಟಿ. ಜಯಂತ್, ಸಾಗರಿ ನಾಗೇಶ್, ಶೀಲಾ ಸುಂದರೇಶ್ ಇದ್ದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆಗಾಗಿ ಆಟೋ ಚಾಲಕ ಮಹಮ್ಮದ್ ಷಫಿರನ್ನು ಸನ್ಮಾನಿಸಲಾಯಿತು.
ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಸುಜಿತ್‌ರನ್ನು ಸನ್ಮಾನಿಸಲಾಯಿತು. ರೋಟರಿ ವಿಮಾ ಬಾಂಡ್‌ಗಳನ್ನು 6 ಫಲಾನುಭವಿಗಳಿಗೆ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.