ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ
ತರೀಕೆರೆ: ಬರಲಿರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸನ್ನದ್ದಗೊಳಿಸಬೇಕು ಎಂದು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಪಟ್ಟಣದ ಕಾಳಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೃತಿಗೆಡಬೇಕಾಗಿಲ್ಲ: ಕಾರ್ಯಕರ್ತರು ಪಕ್ಷದ ಬೇರು, ಸಂಘಟನೆ ಪಕ್ಷದ ದೇಹವಿದ್ದಂತೆ. ಪಕ್ಷ ವ್ಯಕ್ತಿ ಕೇಂದ್ರಿತ ಆದಲ್ಲಿ ಅದರ ಪರಿಣಾಮ ಏನು ಎಂಬುದನ್ನು ಈಗಾಗಲೇ ಮನವರಿಕೆ ಆಗಿದೆ. ಚುನಾವಣೆ
ಸೋಲಿನಿಂದ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಸ್ನದ್ಧಗೊಳಿಸುವಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಮಲೆನಾಡು ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಎನ್. ಮಂಜುನಾಥ್ ಮಾತನಾಡಿ, ಪಕ್ಷದ ಅಧ್ಯಕ್ಷ ಹುದ್ದೆ ಅಧಿಕಾರವಲ್ಲ, ಅದು ಮಹತ್ವದ ಜವಾಬ್ದಾರಿ. ಪಕ್ಷವನ್ನು ಬೆಳೆಸುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.
ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಗೊಂಡ ಕರಕುಚ್ಚಿ ಮೋಹನ್ ಅವರಿಗೆ ನಿಕಟಪೂರ್ವ ಅಧ್ಯಕ್ಷ ಆರ್. ದೇವಾನಂದ್ ಅವರು ಪಕ್ಷದ ಧ್ವಜ ನೀಡುವುದರ ಮೂಲಕ ಶುಭ ಕೋರಿದರು
ಜಿಪಂ ಸದಸ್ಯ ಕಲ್ಮರುಡಪ್ಪ, ಆರ್. ದೇವಾನಂದ್ ಮತ್ತಿತರರು ಮಾತನಾಡಿದರು. ಎಂ.ಆರ್. ಲೋಹಿತ್, ದುಗ್ಲಾಪುರ ಮಂಜುನಾಥ್, ಅವಿನಾಶ್, ಟಿ.ಜಿ. ಸದಾನಂದ್, ಸುನೀಲ್, ರವಿಶಂಕರ್, ಅರವಿಂದ್ ಪಕ್ಷದ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

