ಚಿಕ್ಕಮಗಳೂರು

ಮಲ್ಲಂದೂರು ರಸ್ತೆ ಅಭಿವೃದ್ಧಿ: ಸಂಸದ ಹೆಗ್ಡೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜು.21
ಹಾರ್ಜಿಹಳ್ಳಿ ಮಾಕೋಡು ಮಾರ್ಗವಾಗಿ ಮಲ್ಲಂದೂರು ವರೆಗಿನ ರಸ್ತೆಯನ್ನು ಶೀಘ್ರದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಮಾಕೋಡು ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿ, ಈ ಮಾರ್ಗದಲ್ಲಿ ಮಲ್ಲಂದೂರು ವರೆಗಿನ 4 ಕಿ.ಮೀ. ರಸ್ತೆಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ದುರಸ್ತಿ ಪಡಿಸುವುದಾಗಿ ತಿಳಿಸಿದ ಅವರು, ಈ ರಸ್ತೆಗೆ ಹೊಂದಿಕೊಂಡಿರುವ ಅಕ್ಕಪಕ್ಕದವರು ಜಾಗ ಬಿಟ್ಟು ಕೊಡಲು ಒಪ್ಪಿದರೆ ಅಗಲೀಕರಣ ಮಾಡಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಸುಸಜ್ಜಿತ ರಸ್ತೆ ಮಾಡಿಕೊಡುವುದಾಗಿ ಭರವಸೆ ನೀಡಿದರು.
ವಿದ್ಯುತ್ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಹಿತಿ ಕಲೆ ಹಾಕಿದ ಸಂಸದರು ಗ್ರಾಮಾಂತರ ಪ್ರದೇಶದಲ್ಲಿ ಮೂಲ ಸೌಕರ್ಯಗಳ ಕೊರತೆ ನೀಗಿಸಲು ಪ್ರಥಮ ಆದ್ಯತೆ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವವರನ್ನು ಗಮನದಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಒತ್ತುವರಿ ಸಮಸ್ಯೆ ಉಲ್ಬಣಿಸಿದ್ದು, ಈ ಸಂಬಂಧ ಕೇಂದ್ರದಲ್ಲಿ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಂಬಂಧ ಪಟ್ಟ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದರು.
ಗ್ರಾಮಸ್ಥರಾದ ಎಂ.ಎನ್. ನಾರಾಯಣ್ ಗೌಡ ಮಾತನಾಡಿ, ಹಲವು ದಶಕಗಳಿಂದ ಈ ರಸ್ತೆ ಗುಂಡಿಗಳಿಂದ ಕೂಡಿದ್ದು ನಿತ್ಯ ನೂರಾರು ವಿದ್ಯಾರ್ಥಿಗಳು ಇದೆ ರಸ್ತೆಯಲ್ಲಿ ಓಡಾಡುತ್ತಾರೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಬೇಡಿಕೆ ಇಟ್ಟರೆ ಕಾಲೋನಿ ಅಭಿವೃದ್ಧಿ, ನೀರಿನ ಸಮಸ್ಯೆ ನಿವಾರಣೆ ಮಾಡಿದ್ದೇವೆಂದು ಮೂಗಿಗೆ ತುಪ್ಪ ಸವರಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಲಕ್ಷಾಂತರ ರು. ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿದರು. ರಸ್ತೆ ವಿದ್ಯುತ್ ನೀರಿನ ಸಮಸ್ಯೆಗೆ ಸ್ಪಂದಿಸಿದರೆ ಗ್ರಾಮಸ್ಥರು ಚಿರಋಣಿಯಾಗಿರುತ್ತೇವೆಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ, ಎ.ಕೆ. ವಸಂತೇಗೌಡ, ಪ್ರೀತಮ್ ಗೌಡ, ಗ್ರಾಪಂ ಸದಸ್ಯ ಶಶಿಕಲಾ ರಮೇಶ್, ಮಂಜೇಗೌಡ, ರಾಜೇಗೌಡ, ನಾರಾಯಣ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.