ಆ.4ರಂದು ಪಶ್ಚಿಮಘಟ್ಟ ಉಳಿಸಿ ರಾಷ್ಟ್ರೀಯ ಸಮಾವೇಶ
ಚಿಕ್ಕಮಗಳೂರು: ಗೋವಾದಲ್ಲಿ ಆ.4 ರಂದು ಪಶ್ಚಿಮಘಟ್ಟ ಉಳಿಸಿ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ಪಶ್ಚಿಮಘಟ್ಟ ಉಳಿಸಿ ಸಮಿತಿಯ ರಾಜ್ಯ ಸಂಘಟಕ ಬಿ. ರುದ್ರಯ್ಯ ತಿಳಿಸಿದ್ದಾರೆ.
ಸಮಾವೇಶವನ್ನು ವಿಜ್ಞಾನಿ ಮಾಧವ ಗಾಡ್ಗೀಳ್ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಶ್ಚಿಮಘಟ್ಟ ಪರಿಸರದಲ್ಲಿ ಕಳೆದ 50 ವರ್ಷಗಳಿಂದ ವಿನಾಶಕಾರಿ ಚಟುವಟಿಕೆಗಳು, ಅರಣ್ಯ ಮಾಫಿಯಾ, ಕಲ್ಲು ಗಣಿಗಾರಿಕೆ ಹಾಗೂ ಕಾರ್ಪೋರೇಟ್ ಮಾಫಿಯಾಗಳು ನಿರಂತರವಾಗಿ ಅರಣ್ಯ ಲೂಟಿ ಮಾಡುತ್ತಿವೆ. ಈ ಲೂಟಿಯನ್ನು ವಿರೋಧಿಸಿ ನಡೆದ ಚಳವಳಿಯಿಂದಾಗಿ ಕೇಂದ್ರ ಸರ್ಕಾರ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನೇತೃತ್ವದಲ್ಲಿ ಆಯೋಗ ರಚಿಸಿದ್ದು, ಈ ಆಯೋಗ 2011ರಲ್ಲಿ 510 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ ವರದಿಯ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ತಳ್ಳಿ ಹಾಕುವುದರ ಮೂಲಕ ಮಾಫಿಯಾಗಳ ಪರವಾದ ತೀರ್ಮಾನಕ್ಕೆ ಬದ್ಧವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಐ(ಎಂ) ಪಕ್ಷಗಳು ಕೂಡ ಗಾಡ್ಗೀಳ್ ವರದಿಯನ್ನು ವಿರೋಧಿಸಿವೆ. ಈ ಸಂಬಂಧ ಸರ್ಕಾರದ ಗಮನ ಸೆಳೆಯಲು ಆಗಸ್ಟ್ 4 ರಂದು ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪರಿಸರವಾದಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

