ಗೂಡ್ಸ್ ವಾಹನ ನಿಲುಗಡೆಗೆ ಮನವಿ
ಚಿಕ್ಕಮಗಳೂರು: ನಗರದ ಕೆಲ ರಸ್ತೆಗಳಲ್ಲಿ ಗೂಡ್ಸ್ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಗೂಡ್ಸ್ ವಾಹನ ಮಾಲೀಕರು ಮತ್ತು ಚಾಲಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೂಡ್ಸ್ ವಾಹನಗಳೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಮಾಲೀಕರು ಮತ್ತು ಚಾಲಕರು ವಾಹನಗಳನ್ನು ನಗರಸಭೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿ ನಂತರ ಜಿಲ್ಲಾಧಿಕಾರಿ ವಿ. ಯಶ್ವಂತ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಪೂಜಾ ಸರ್ಕಲ್, ಹನುಮಂತಪ್ಪ ವೃತ್ತ, ಗಣೇಶ್ ಸಾಮಿಲ್, ತೊಗರಿ ಹಂಕಲ್ ವೃತ್ತ, ಚಾಮುಂಡಿ ಮೆಡಿಕಲ್ಸ್, ಶಂೃಗಾರ್ ಸರ್ಕಲ್, ಟಿವಿಎಸ್ ಸರ್ಕಲ್ ಮತ್ತು ಟೆಂಡರ್ ಚಿಕನ್ ಸಮೀಪ ಗೂಡ್ಸ್ ವಾಹನಗಳಿಗೆ ನಿಲುಗಡೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ತಾವುಗಳು ಬಾಡಿಗೆಗೆ ತೆರಳಿ ಬದುಕು ಸಾಗಿಸುವುದು ಕಷ್ಟವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಗೂಡ್ಸ್ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಚಾಲನೆ
ಮೂಡಿಗೆರೆ: ತಾಲೂಕಿನ ನಿಡುವಾಳೆ ಗ್ರಾಮದ ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಕೆಜಿಗೆ 1 ರು.ನಂತೆ ಅಕ್ಕಿ ನೀಡುವುದರ ಮೂಲಕ ಗ್ರಾಪಂ ಅಧ್ಯಕ್ಷೆ ರೀಟಾ ಕ್ಯಾಂಡೀ ಪಿಂಟೋ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸರ್ಕಾರ ಬಡವರಿಗೆ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಉಪಾಧ್ಯಕ್ಷ ಸೋಮೇಶ್ ಮಾತನಾಡಿ, ಅಕ್ಕಿಯನ್ನು ಕೊಂಡು ಹಣಕ್ಕೆ ಮಾರದೆ ಮನೆಯಲ್ಲೇ ಉಪಯೋಗಿಸುವಂತೆ ಮತ್ತು ನ್ಯಾಯ ಬೆಲೆ ಅಂಡಿಯಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಬೆಲೆಗೆ ಒತ್ತಾಯಿಸಿದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

