ಆಧಾರ್: ನೋಂದಣಿ ಕೇಂದ್ರಕ್ಕೆ ಮನವಿ
ಬಾಳೆಹೊನ್ನೂರು: ಆಧಾರ್ ಕಾರ್ಡ್ ನೋಂದಣಿ ಕೇಂದ್ರವನ್ನು ಬಾಳೆಹೊನ್ನೂರಿನಲ್ಲಿ ಕೂಡಲೇ ಸ್ಥಾಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ನಾಡ ಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಮೋಹನ್ ಕುಮಾರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ನಂತರ ಕರವೇ ಅಧ್ಯಕ್ಷ ಶಂಕರ್ ಜಕ್ಕಣಕ್ಕಿ ಮಾತನಾಡಿ, ರಾಷ್ಟ್ರಾದ್ಯಂತ ಆಧಾರ್ ಕಾರ್ಡ್ ಮಾಡಿಸುವ ಕಾರ್ಯ ಚಾಲ್ತಿಯಲ್ಲಿದ್ದು, ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರಿ ಸೌಲಭ್ಯ, ಬ್ಯಾಂಕ್ ಕಾರ್ಯ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರ್ಯಗಳಿಗೆ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಜಿಲ್ಲೆಯಲ್ಲೇ ಅತಿದೊಡ್ಡ ಗ್ರಾಮ ಪಂಚಾಯ್ತಿ ಹೊಂದಿರುವ ಹಾಗೂ ಹೆಚ್ಚು ಜನಸಂಖ್ಯೆ ವಾಸ ಮಾಡುತ್ತಿರುವ ಬಾಳೆಹೊನ್ನೂರು ಹೋಬಳಿ ಕೇಂದ್ರಕ್ಕೆ ಆಧಾರ್ ಕಾರ್ಡ್ ಕೇಂದ್ರವಿಲ್ಲದ್ದರಿಂದ ತಾಲ್ಲೂಕು ಕೇಂದ್ರ ನರಸಿಂಹರಾಜಪುರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಕೆಲ ಕಚೇರಿಗಳಲ್ಲಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಕೆಲಸಗಳನ್ನು ಮಾಡುವುದಿಲ್ಲವೆಂದು ಒತ್ತಡ ಹೇರುತ್ತಿದ್ದಾರೆ. ಇದರಿಂದ ಜನಸಮಾನ್ಯರಿಗೆ ತೊಂದರೆಯಾಗಲಿದ್ದು ಅಧಿಕಾರಿಗಳು ಕೂಡಲೇ ಆಧ್ರ್ ಕಾರ್ಡ್ ಕೇಂದ್ರವನ್ನು ತೆರೆದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಗ್ರಾಮ ಲೆಕ್ಕಿಗ ಸೋಮಶೇಖರ್, ಕರವೇ ನಗರ ಅಧ್ಯಕ್ಷ ನವೀನ್ ಕಡ್ಲೇಮಕ್ಕಿ, ಕಾರ್ಯದರ್ಶಿ ಹರೀಶ್ ಹಲಸೂರು, ಸದಸ್ಯರಾದ ಆಟೋ ಚಂದ್ರು, ಕಡ್ಲೇಮಕ್ಕಿ ಶಾಫಿ, ರಫಿಕ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

