ಚಿಕ್ಕಮಗಳೂರು

ಜನಸಂಖ್ಯಾ ಸ್ಫೋಟದಿಂದ ಬಡತನ ಹೆಚ್ಚಳ

Published On :

ಮೂಡಿಗೆರೆ: ಇಂದಿನ ದಿನಗಳಲ್ಲಿ ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಒಂದೆಡೆಯಾದರೆ, ಅರಣ್ಯ ನಾಶದ ಜೊತೆಗೆ ಬಡತನ ಮತ್ತು ನಿರುದ್ಯೋಗ ಹೆಚ್ಚಾಗುತ್ತಿದೆ ಎಂದು ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ ಆತಂಕ ವ್ಯಪಡಿಸಿದರು.
 ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಹಾಗೂ ತಾಲೂಕು ಆಡಳಿತ, ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಸ್ಪತ್ರೆ, ಪ್ರಥಮ ದರ್ಜೆ ಕಾಲೇಜು, ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಪಾಯ ಕಟ್ಟಿಟ್ಟ ಬುತ್ತಿ: ವಿಶ್ವದ ಜನಸಂಖ್ಯೆ 1982ರ ಜುಲೈ 11ರಲ್ಲಿ 500 ಕೋಟಿಯನ್ನು ತಲುಪಿತ್ತು. ರಾಜ್ಯದ ಜನಸಂಖ್ಯೆ 1951 ರಲ್ಲಿ 1 ಕೋಟಿ 94 ಲಕ್ಷ ಇದ್ದು. 2011 ರ ಜನಗಣತಿಯ ಪ್ರಕಾರ 6 ಕೋಟಿ 11 ಲಕ್ಷ  ಆಗಿದೆ. ಇದೇ ವೇಗದಲ್ಲಿ ಜನಸಂಖ್ಯೆ ಬೆಳೆಯುತ್ತಿದ್ದರೆ ಮುಂದಿನ 45 ವರ್ಷದಲ್ಲಿ ರಾಜ್ಯದ ಜನಸಂಖ್ಯೆ 12 ಕೋಟಿ ದಾಟುವ ಸಾಧ್ಯತೆ ಇದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಜಿಪಂ ಸದಸ್ಯ ಎಂ.ಎಸ್. ಅನಂತ್ ಕಾರ್ಯಕ್ರಮ ಉದ್ಘಾಟಿಸಿ, ಜನಸಂಖ್ಯಾಸ್ಫೋಟದಿಂದ ಜಾಗತಿಕ ತಾಪಮಾನ ಏರುಪೇರಾಗುತ್ತಿದ್ದು, ಹೆಚ್ಚಿನ ವಾಯು, ಜಲ ಮತ್ತು ಶಬ್ದ ಮಾಲಿನ್ಯವಾಗುತ್ತಿದೆ. ಪ್ರಕೃತಿ ನಾಶವಾಗಿ ಸಾಮಾಜಿಕ ಅಸಮಾನತೆ ಉಂಟಾಗುತ್ತಿದೆ ಎಂದರು.
ತಾಪಂ ಸದಸ್ಯ ರಂಜನ್ ಅಜಿತ್ ಕುಮಾರ್, ಎ.ಜೆ. ಸುಬ್ರಾಯ, ಹೆ.ಇ. ಹೂವಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ. ಯೋಗೇಶ್ ಪಿ. ಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.