ಕಳಪೆ ಕಾಮಗಾರಿನಡೆಸಿದ: ಗುತ್ತಿಗೆದಾರರು ಕಪ್ಪು ಪಟ್ಟಿಗೆ
ಮೂಡಿಗೆರೆ: ಸರ್ಕಾರದ ಕಟ್ಟಡಗಳನ್ನು ಗುತ್ತಿಗೆದಾರರು ಬೇಕಾಬಿಟ್ಟಿ ನಿರ್ಮಿಸುತ್ತಿರುವುದರಿಂದಲೇ ಸರ್ಕಾರಿ ಶಾಲಾ ಕಾಲೇಜು ಹಾಗೂ ಕಚೇರಿಗಳು ಸೋರುತ್ತಿರುವುದು.
ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದರೊಂದಿಗೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ತಾ.ಪಂ.ಸದಸ್ಯರು ಜೆಡಿಎಸ್ ಮುಖಂಡ ರಂಜನ್ ಅಜಿತ್ ಕುಮಾರ್ ಒತ್ತಾಯಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಅವರ, ಛತ್ರಿ ಹಿಡಿದು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ನೋಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕೆಲವೇ ವರ್ಷಗಳಲ್ಲಿ ಕಟ್ಟಡ ಕುಸಿಯುವ ಹಂತವನ್ನು ತಲುಪಿದೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಭಯದಿಂದಲೇ ಪಾಠ ಕಲಿಯಬೇಕಾಗಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಕಂಪ್ಯೂಟರ್ಗಳ ಮೇಲೆ ಮಳೆ ನೀರು ಸೋರಿಕೆಯಿಂದ ಹಾಳಾಗುತ್ತಿದೆ. ಪಿಠೋಪಕರಣಗಳು ಹಾಳಾಗಿವೆ ಶಾಸಕ ಬಿ.ಬಿ. ನಿಂಗಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದು, ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕಳಪೆ ಕಾಮಗಾರಿ ಗುತ್ತಿಗೆದಾರನು ಕಪ್ಪು ಪಟ್ಟಿಗೆ ಶೇರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದರು.
ತಾ.ಪಂ.ಸದಸ್ಯ ಎ.ಜೆ. ಸುಬ್ರಾಯ ಮಾತನಾಡಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

