ಉಸ್ತುವಾರಿ ಸಚಿವರನ್ನು ಬದಲಾಯಿಸಿ: ಗಿರೀಶ್
ಕ.ಪ್ರ.ವಾರ್ತೆ ಕಡೂರು ಜು.26: ಜಿಲ್ಲೆಯ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಜಿಲ್ಲೆಯ ಜನರ ಸಮಸ್ಯೆಗೆ ಸ್ಪಂದಿಸದೇ ನಕಾರಾತ್ಮಕ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದು ಉಪ್ಪಾರ ಜನಾಂಗದ ರಾಷ್ಟ್ರೀಯ ಅಧ್ಯಕ್ಷ, ಜೆಡಿಎಸ್ ಮುಖಂಡ ಜಿ.ಕೆ. ಗಿರೀಶ್ ಉಪ್ಪಾರ್ ಹೇಳಿದರು.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಗಿರೀಶ್, ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಸಮಸ್ಯೆ ಮತ್ತು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಿಂತಿಸಿ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾದ ಸಚಿವರು ಜಿಲ್ಲೆಯ ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸದಿರುವ ಸಚಿವರ ಧೋರಣೆ ಖಂಡನೀಯವಾಗಿದೆ ಎಂದವರು ಹೇಳಿದರು.
ಸ್ಪಂದನೆ ಇಲ್ಲ: ಸರ್ಕಾರವು ತಮ್ಮ ಆಸ್ತಿ ಎಂಬಂತೆ ವರ್ತನೆ ಮಾಡುತ್ತಿರುವ ಸಚಿವರು ಕಡೂರು ತಾಲೂಕು ಬರಪೀಡಿತ ಪ್ರದೇಶವಾಗಿದ್ದು ಸಂಕಷ್ಟದಲ್ಲಿರುವ ತಾಲೂಕಿನ ರೈತರು, ಕೂಲಿ ಕಾರ್ಮಿಕರು ತಮ್ಮ ಸಮಸ್ಯೆಯನ್ನು ಸಚಿವರ ಮುಂದೆ ಅಳಲು ತೋಡಿಕೊಳ್ಳಲು ಹೋದರೆ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ ಎಂದರು.
ಸಂಬಂಧಿಸಿದ ಸಚಿವರ ಬಳಿ ತಮ್ಮ ಸಮಸ್ಯೆ ಹೇಳಿಕೊಳ್ಳದೇ ಬೇರೆಯವರ ಬಳಿ ಹೇಳಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು, ಕಡೂರು ವಿಧಾನಸಭಾ ಕ್ಷೇತ್ರದ ಜನ ಜಿಲ್ಲೆಯ ಉಸ್ತುವಾರಿ ಸಚಿವರೆದುರು ಹೇಳಲು ಹೋದರೆ ಅವರ ಅಹವಾಲು ಕೇಳದೆ ಸಚಿವರು ತಿರಸ್ಕರಿಸಿದ್ದಾರೆ ಎಂದು ಗಿರೀಶ್ ದೂರಿದ್ದಾರೆ.
ಆದ್ದರಿಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯಚಂದ್ರ ಜೈನ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಜಾಗೊಳಿಸಿ ಅಭಿವೃದ್ಧಿ ಚಿಂತನೆ ನಡೆಸಿ, ಜನರ ಪರವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ಹುಮ್ಮಸ್ಸು ಇರುವ ಬೇರೆ ಸಚಿವರನ್ನು ನೇಮಿಸಬೇಕು ಎಂದು ಸರ್ಕಾರವನ್ನು ಅಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

