ಮುಖ್ಯ ರಸ್ತೆಯಲ್ಲಿ ಬಿರುಕು: ಆತಂಕ
ಶೃಂಗೇರಿ: ಪಟ್ಟಣದ ಮುಖ್ಯದ್ವಾರದ ಬಳಿ ಕಳೆದ ಕೆಲ ದಿನಗಳ ಸತತ ಮಳೆಯಿಂದಾಗಿ ಮುಖ್ಯ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು, ಡಾಂಬಾರು ಜಲ್ಲಿ ಸಹಿತ ರಸ್ತೆ ಕಿತ್ತೆದ್ದು ಬಂದಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಸೇರಿದಂತೆ ಪಾದಾಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದೆ. ಅಪಾಯಕಾರಿ ತಿರುವು, ಇಳಿಜಾರು ಇರುವುದರಿಂದ ವಾಹನಗಳು ಏಕಏಕಿ ನಿಯಂತ್ರಣ ತಪ್ಪಿದರೆ ಅವಗಡಗಳು ಸಂಭವಿಸುವುದರಲ್ಲಿ ಸಂಶಯವಿಲ್ಲ. ಶೃಂಗೇರಿಯಿಂದ ಶಿವಮೊಗ್ಗ, ಚಿಕ್ಕಮಗಳೂರು, ಆಗುಂಬೆ ತೀರ್ಥಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತವಾಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ.
ಸಾರ್ವಜನಿಕರ, ಪ್ರಯಾಣಿಕರ ಸುರಕ್ಷತೆ ದೃಷ್ಠಿಯಿಂದ ಹೆದ್ದಾರಿ ಇಲಾಖೆ ಕೂಡಲೇ ಇತ್ತ ಗಮನ ಹರಿಸಿ, ಇದನ್ನು ಗಂಭೀರವಾಗಿ ಪರಿಗಣಿಸಿ ಇದನ್ನು ಸರಿಪಡಿಸಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಮುಂದಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

