ದತ್ತಪೀಠ ರಸ್ತೆಯಲ್ಲಿ ಭೂ ಕುಸಿತ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಜು.29
ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ, ಹಾನಿಯ ಪ್ರಮಾಣ ಹೆಚ್ಚಾಗುತ್ತಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಭಾನುವಾರ ರಾತ್ರಿ ಭೂ ಕುಸಿತ ಉಂಟಾಗಿದೆ.
ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ರಸ್ತೆಯ ಮೇಲೆ ಬಿದ್ದ ಮಣ್ಣು ತೆರವು ಕಾರ್ಯ ಸೋಮವಾರ ಮಧ್ಯಾಹ್ನದವರೆಗೆ ನಡೆಯಿತು. ಬಳಿಕ ಎಂದಿನಂತೆ ವಾಹನಗಳ ಸಂಚಾರಕ್ಕೆ ದಾರಿ ಸುಗಮವಾಯಿತು.
ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ, ಮನೆಗಳಿಗೆ ಹಾನಿ, ಭೂ ಕುಸಿತ ಮಾತ್ರ ನಿಂತಿಲ್ಲ.
ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿರುವ ಕವಿಕಲ್ ಗಂಡಿ ಬಳಿ ಬೆಟ್ಟದ ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ರಸ್ತೆಯ ಮೇಲೆ ಕುಸಿದಿದೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ರಸ್ತೆಯ ಮೇಲೆ ನಿರಂತರವಾಗಿ ನೀರು ಹರಿಯುತ್ತಿದೆ. ಇದರಿಂದಾಗಿ ಬೆಟ್ಟದ ಮಣ್ಣು ಜಾರಿ ರಸ್ತೆಗೆ ಬಿದ್ದಿತ್ತು. ಈ ಭಾಗದ ಗ್ರಾಮಸ್ಥರಿಗೆ ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಮುಂದೆ ಪ್ರಯಾಣಿಸಲು ಆಗದೆ ಅಡಚಣೆಯಾಯಿತು.
ಇಲ್ಲಿ ಭೂ ಕುಸಿತ ಇದೇ ಮೊದಲಲ್ಲ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಆಗಾಗ ಅನಾಹುತಗಳು ಸಂಭವಿಸುತ್ತಲೇ ಇವೆ. ಕಳೆದ ಶನಿವಾರ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಪಿಕಪ್ ವಾಹನ ಅಪಘಾತಕ್ಕೆ ಈಡಾಗಿತ್ತು. ಕಳೆದ ವರ್ಷ ಇದೇ ಸ್ಥಳದಲ್ಲಿ ಭೂ ಕುಸಿತ ಉಂಟಾಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಆಗ ಮುಂಜಾಗ್ರತಾ ಕ್ರಮವಾಗಿ ಕೆಲ ದಿನಗಳ ಮಟ್ಟಿಗೆ ಭಾರೀ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿತ್ತು. ಇದೀಗ ಮತ್ತೆ ಇದೇ ಸ್ಥಳದಲ್ಲಿ ಭೂ ಕುಸಿತ ಉಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

