ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ
ನರಸಿಂಹರಾಜಪುರ: ಪಟ್ಟಣದ ರಾಜೀವ ನಗರ, ಪೊಲೀಸ್ ವಸತಿ ಗೃಹ,ಚಿಕ್ಕಅಗ್ರಹಾರವಲಯ ಅರಣ್ಯಾಧಿಕಾರಿಗಳ ಕಚೇರಿ, ನಾಟ ಡಿಪೋ ಹಾಗೂ ದಿಂಡಿನಕೊಪ್ಪ, ಕಾರೇನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಡಿಪೋ ರಸ್ತೆಯಲ್ಲಿ ಹೊಂಡಗಳು ಬಿದ್ದಿದ್ದು ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ರಾಜೀವ್ ನಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ನೂರಾರು ಜನರು ಸೋಮವಾರ ರಸ್ತೆಯ ಹೊಂಡದಲ್ಲಿ ಬಾಳೆ ಗಿಡ ನೆಟ್ಟು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜೀವ್ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಜುಬೇದ ಮಾತನಾಡಿ, ರಸ್ತೆಯ ಉದ್ದಕ್ಕೂ ಭಾರೀ ಗಾತ್ರದ ಹೊಂಡ, ಗುಂಡಿಗಳಾಗಿದ್ದರೂ ಸಂಬಂಧಪಟ್ಟವರು ರಸ್ತೆ ದುರಸ್ಥಿ ಮಾಡಿಸುತ್ತಿಲ್ಲ. ಈ ರಸ್ತೆಗೆ ಡಾಂಬರೀಕರಣ ಮಾಡಿ ಹಲವು ವರ್ಷಗಳೇ ಕಳೆದಿದೆ. ರಸ್ತೆ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಹೇಳುತ್ತಿದ್ದರೂ ಗುತ್ತಿಗೆದಾರರು ರಸ್ತೆ ಕಾಮಗಾರಿ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಸ್ತೆಯಲ್ಲಿ ನೂರಾರು ವಾಹನಗಳು ತಿರುಗುತ್ತಿದ್ದು ಸಂಬಂಧಪಟ್ಟವರು ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿ ಮಳೆಗಾಲ ಕಳೆದ ನಂತರ ಶಾಶ್ವತ ಕಾಮಗಾರಿ ಮಾಡಲಿ ಎಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯೆ ಲಿಲ್ಲಿ, ರಾಜೀವ ನಗರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಆನಂದ,ಆ ಭಾಗದ ನಿವಾಸಿಗಳು, ಶಾಲಾ ಮಕ್ಕಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

