ಚಿಕ್ಕಮಗಳೂರು

ಸ್ವಾತಂತ್ರ್ಯ ದಿನಾಚರಣೆ: ಪೂರ್ವಭಾವಿ ಸಭೆ

Published On :

ಮೂಡಿಗೆರೆ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರ್ ಎ.ವಿ. ರುದ್ರಾಪ್ಪಾಜೀರಾವ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಯಿತು.
 ಸಭೆಯಲ್ಲಿ ಎಲ್ಲ ಸಂಘ ಸಂಸ್ಥೆಗಳು, ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಹಕಾರ ನೀಡುವಂತೆ ತಹಸೀಲ್ದಾರ್ ಎ.ವಿ. ರುದ್ರಪ್ಪಾಜೀ ರಾವ್ ಕೋರಿದರು.
 ಪಪಂ ಸದಸ್ಯರ ಹೆಸರನ್ನು ಅಹ್ವಾನ ಪತ್ರಿಕೆಯಲ್ಲಿ ಹಾಕಲು ಅಧ್ಯಕ್ಷರ ಆಯ್ಕೆ ಮಾಡಿಲ್ಲ. ಆದ್ದರಿಂದ ಹೆಸರನ್ನು ಹಾಕುವಂತಿಲ್ಲ ಎಂದು ತಹಸೀಲ್ದಾರರು ತಿಳಿಸಿದಾಗ ಆಕ್ರೋಶಗೊಂಡ ಸದಸ್ಯರು ಇದು ಸರಿಯಲ್ಲ ಎಂದು ಪಟ್ಟು ಹಿಡಿದರು.
ನಂತರ ಪಟ್ಟಣದ ಹೊಯ್ಸಳ ಕ್ರಿಡಾಂಗಣಕ್ಕೆ ಆಗಮಿಸಿ ಪರಿಶೀಲಿಸಿದಾಗ ಸರ್ಕಾರ ಮೂರು ಲಕ್ಷ ರು.ಗಳ ವೆಚ್ಚದಲ್ಲಿ ನಿರ್ಮಿಸಿರುವ ಜಿಮ್ ಕೊಠಡಿ, ಅನೈತಿಕ ಚಟುವಟಿಕೆಗಳ ತಾಣವಾಗಿರುವುದಕ್ಕೆ ಹಲವು ವಸ್ತುಗಳು ಕೊಠಡಿಯಲ್ಲಿ ದೊರೆತವು. ಇದರಿಂದ ಬೇಸರಗೊಂಡ ತಹಸೀಲ್ದಾರ್ ಪಪಂ ಮುಖ್ಯಾಧಿಕಾರಿಗೆ ಕೊಠಡಿ ಸ್ವಚ್ಛಗೊಳಿಸಿ ಅ.15 ಕ್ಕೆ ಶುಚಿತ್ವ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಪಪಂ ಸದಸ್ಯ ಮದೀಶ್, ಹೊರಟ್ಟಿ ರಘು ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.