ಚಿಕ್ಕಮಗಳೂರು

ಅವಧಿ ವಿಸ್ತರಣೆ

Published On :

ಚಿಕ್ಕಮಗಳೂರು: ಪ್ರಸಕ್ತ ಸಾಲಿಗೆ ವಿವಿಧ ಸ್ನಾತಕೋತರ ಪದವಿ ಪ್ರಥಮ ಸೆಮಿಸ್ಟರ್ ಪ್ರವೇಶಾತಿಗೆ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ದಂಡ ಶುಲ್ಕ 500 ಹಾಗೂ ತೃತೀಯ ಹಾಗೂ ಐದನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ದಂಡ ಶುಲ್ಕ 300 ಗಳೊಂದಿಗೆ ಕೊನೆಯ ದಿನವನ್ನು ಆಗಸ್ಟ್ 3ರವರೆಗೆ ವಿಸ್ತರಿಸಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮಕಾತಿ ರ್ಯಾಲಿ
ಭಾರತಿಯ ವಾಯು ಸೇನಾ ವತಿಯಿಂದ ಏರ್‌ಮ್ಯಾನ್ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಭರ್ತಿ ರ್ಯಾಲಿ ಜುಲೈ 31 ರಿಂದ ಆಗಸ್ಟ್ 1 ಬೆಳಿಗ್ಗೆ 6 ಗಂಟೆಗೆ ಕೊಪ್ಪಳದ ಗದಗ್ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಹಾಸನ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.  
ಅರ್ಜಿ ಆಹ್ವಾನ
ತರೀಕೆರೆ ತಾಲೂಕಿನ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅತ್ತಿಗನಾಳು, ಸೊಕ್ಕೆ, ಅರಬಲ, ಜಂಬದಹಳ್ಳ, ಮುಡುಗೋಡಿನ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ಹುದ್ದೆಗೆ ಮತ್ತು ಬೇಲೇನಹಳ್ಳಿ ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯದಿನ, ಅರ್ಜಿ ನಮೂನೆ Ú ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶ್ರೀರಾಮ ಬಡಾವಣೆ, ತರೀಕೆರೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.