ಚಿಕ್ಕಮಗಳೂರು

ಕಂಪ್ಯೂಟರ್ ಕೊಡುಗೆ ಕಲಿಕೆಗೆ ಸಹಕಾರಿ

Published On :

ಚಿಕ್ಕಮಗಳೂರು: ಹಿರೇಮಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ರೌಂಡ್ ಟೇಬಲ್ 172 ಹಾಗೂ ಚಿಕ್ಕಮಗಳೂರು ರೌಂಡ್ ಟೇಬಲ್ 164 ಸಂಸ್ಥೆಗಳಿಂದ ನಾಲ್ಕು ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಲಾಯಿತು.
ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಕಂಪ್ಯೂಟರ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉತ್ತಮ ಮೈದಾನ, ಪರಿಸರ, ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳನ್ನು ಹೊಂದಿರುವ ಈ ಶಾಲೆಯನ್ನು ಗುರುತಿಸಿ ಕಂಪ್ಯೂಟರ್ ಕೊಡುಗೆ ನೀಡುತ್ತಿರುವುದು ಮಕ್ಕಳ ಕಲಿಕೆಗೆ ಸಹಕಾರಿಯಾಗಲಿದೆ ಎಂದರು.
ಉತ್ತಮ ಕಾರ್ಯ: ಬೆಂಗಳೂರು ಮತ್ತು ಚಿಕ್ಕಮಗಳೂರು ರೌಂಡ್ ಟೇಬಲ್ ಪದಾಧಿಕಾರಿಗಳು ಮತ್ತು ಸದಸ್ಯರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ ಅವರು, ಯಾವುದೇ ಪ್ರಚಾರ ಬಯಸದೇ ಈ ಸಂಸ್ಥೆಪದಾಧಿಕಾರಿಗಳು ಜನಪರ ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
ಕಂಪ್ಯೂಟರ್ಗಳನ್ನು ಮುಖ್ಯ ಶಿಕ್ಷಕ ಚನ್ನಯ್ಯ ಅವರಿಗೆ ಹಸ್ತಾಂತರಿಸಿದ ಬೆಂಗಳೂರು ರೌಂಡ್ ಟೇಬಲ್ 172ರ ಅಧ್ಯಕ್ಷ ಅನಿಲ್ ಮಲೂ, ಮಹಿಳಾ ವಿಭಾಗದ ಅಧ್ಯಕ್ಷರಾದ ವೃಂದ ಮಾತನಾಡಿ, ಮಕ್ಕಳ ಕಲಿಕೆ ಸುಲಭ ಮತ್ತು ಸರಳವಾಗಬೇಕು ಎಂಬ ಉದ್ದೇಶದಿಂದ ಶಾಲೆಗೆ ಕಂಪ್ಯೂಟರ್ ನೀಡಲಾಗುತ್ತಿದೆ ಎಂದರು.
ಚಿಕ್ಕಮಗಳೂರು ರೌಂಡ್ ಟೇಬಲ್ 164ರ ಅಧ್ಯಕ್ಷ ಚಂಚಲ್ ನಾಗೇಶ್ ಮಾತನಾಡಿ, ಸ್ಫರ್ಧಾತ್ಮಕ ಯುಗದಲ್ಲಿ ಮಕ್ಕಳು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಓದಿನಿಂದ ಮಾತ್ರ ಈ ಜಗತ್ತು ಗೆಲ್ಲಲು ಸಾಧ್ಯವಿದೆ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಶ್ರದ್ಧೆ ಮತ್ತು ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದರು.
ಮಕ್ಕಳಿಗೆ ಅನುಕೂಲ: ಶಾಲಾಭಿವೃದ್ಧಿ ಸಮಿತಿ ಸದಸ್ಯ ಬಿ.ಎನ್. ಮೋಹನ್ ಕುಮಾರ್ ಮಾತನಾಡಿ, ರೌಂಡ್ ಟೇಬಲ್ ಸಂಸ್ಥೆ ಪದಾಧಿಕಾರಿಗಳು ಮತ್ತು ಸದಸ್ಯರು ಒಳ್ಳೆಯ ಕೆಲಸ ಮಾಡಿದ್ದಾರೆ. ಶಾಲೆಗೆ ಕೊಠಡಿಯೊಂದನ್ನು  ನಿರ್ಮಿಸಿಕೊಡುವುದಾಗಿ ಸಂಸ್ಥೆಯವರು ಭರವಸೆ ನೀಡಿದ್ದಾರೆ. ಅದು ಶೀಘ್ರ ಈಡೇರಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲೇಶ್ ಮಾತನಾಡಿದರು. ಸದಸ್ಯ ಶಿವಪ್ರಸಾದ್, ಎಚ್.ಸಿ. ಗಂಗಾಧರ್, ಚಿಕ್ಕಮಗಳೂರು ರೌಂಡ್ ಟೇಬಲ್ ನಿಕಟಪೂರ್ವ ಅಧ್ಯಕ್ಷ ರೋಹಿತ್, ಕಾರ್ಯದರ್ಶಿ ರಾಜದೀಪ್, ಖಜಾಂಚಿ ಅಮಿತ್ ಉಪಸ್ಥಿತರಿದ್ದರು. ಶಿಕ್ಷಕ ಪುಟ್ಟಸ್ವಾಮಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಚನ್ನಯ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.