ಕಾನೂನು ಪರಿಧಿಯಲ್ಲಿ ಎಲ್ಲರೂ ಬರಬೇಕು
ಕ.ಪ್ರ.ವಾರ್ತೆ, ತರೀಕೆರೆ, ಜೂ.1
ಕಾನೂನು ಪರಿಧಿಯಲ್ಲಿ ಎಲ್ಲರೂ ಬರಬೇಕು ಎಂದು ತರೀಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಿದಾಯತ್ ಉಲ್ಲಾ ಷರೀಫ್ ತಿಳಿಸಿದ್ದಾರೆ.
ಅವರು ಕಾನೂನು ನೆರವು ಸಮಿತಿ, ವಕೀಲರ ಸಂಘ, ಕಾರ್ಮಿಕರ ಸಂಘ ವತಿಯಿಂದ ಸಂಘದ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಅವಶ್ಯಕ: ದೌರ್ಜನ್ಯ ಮುಕ್ತ ಜೀವನ ನಡೆಸಲು ಕಾನೂನು ಅರಿವು- ನೆರವು ಅಗತ್ಯವಾಗಿದೆ, ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ವಿವಾಹ, ಉದ್ಯೋಗ, ಭವಿಷ್ಯ ಇತ್ಯಾದಿಗಳಲ್ಲಿ ಪ್ರತಿಯೊಬ್ಬರಿಗೂ ಕಾನೂನು ಅವಶ್ಯಕವಿದೆ, ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಬೇಕು.
ಅರ್ಹರಿಗೆ ಉಚಿತ ಕಾನೂನು ನೆರವು ಕೊಡಬೇಕು, ಲೋಕ ಅದಾಲತ್ ಮೂಲಕ ಶ್ರಮ ಸಾರ್ಥಕವಾಗುತ್ತದೆ ಎಂದು ಅವರು ತಿಳಿಸಿದರು.
ವಕೀಲ ತೇಜಮೂರ್ತಿ ಮಾತನಾಡಿದರು. ವಕೀಲ ಎಸ್. ಸುರೇಶ್ಚಂದ್ರ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ತರೀಕೆರೆ ಕಿರಿಯ ಸಿವಿಲ್ ನ್ಯಾಯಾಧೀಶರಾದ ಜಯಲಕ್ಷ್ಮಿ, ವಕೀಲ ಮಂಜುನಾಥ್, ಕಾರ್ಮಿಕರ ಸಂಘದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವಕೀಲ ಎಸ್. ಸುರೇಶ್‌ಚಂದ್ರ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

