ಚಿಕ್ಕಮಗಳೂರು

ಸರ್ಕಾರಿ ಸೌಲಭ್ಯ ಅರ್ಹರಿಗೆ ತಲುಪಲಿ

Published On :

ಕ.ಪ್ರ.ವಾರ್ತೆ  ಮೂಡಿಗೆರೆ  ಜೂ.1
ಸರ್ಕಾರಿ ಸೌಕರ್ಯಗಳನ್ನು ಅರ್ಹವಾಗಿ ಜನ ಸಾಮಾನ್ಯರಿಗೆ ತಲುಪಿಸುವ ಗುರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ಸಾಧಿಸಬೇಕು ಎಂದು ಶಾಸಕ ಬಿ.ಬಿ. ನಿಂಗಯ್ಯ ಹೇಳಿದರು.
ಅವರು ಮೂಡಿಗೆರೆಯಿಂದ ಉದುಸೆ ಗ್ರಾಮಕ್ಕೆ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಈ ಗ್ರಾಮಕ್ಕೆ ಹಿಂದೆಯೇ ತಾವು ಸಚಿವರಾಗಿದ್ದಾಗ ಬಸ್ ಸೌಕರ್ಯ ಕಲ್ಪಿಸಲಾಗಿತ್ತು.
 ಆದರೆ ತಾಂತ್ರಿಕ ಕಾರಣಗಳಿಂದ ಅದು ಸ್ಥಗಿತಗೊಂಡಿದ್ದರಿಂದ ಇಲ್ಲಿನ ಜನರಿಗಾಗುತ್ತಿದ್ದ ತೊಂದರೆ ತಪ್ಪಿಸಲು ಮರಳಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಸ್ಥಳೀಯರು ಮುತುವರ್ಜಿ ವಹಿಸುವುದು ಅಗತ್ಯ ಎಂದ ಅವರು, ಗ್ರಾಮದ ಜನರ ಅನುಕೂಲದ ದೃಷ್ಟಿಯಿಂದ ರಸ್ತೆ, ವಿದ್ಯುತ್ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
ನಾನಾ ರೀತಿಯ ಸಮಸ್ಯೆ: ಜಿಪಂ ಸದಸ್ಯ ವಿ.ಕೆ. ಶಿವೇಗೌಡ ಮಾತನಾಡಿ, ಕ್ಷೇತ್ರದಲ್ಲಿ ನಾನಾ ರೀತಿಯ ಸಮಸ್ಯೆ ಜನಸಾಮಾನ್ಯರನ್ನು ಕಂಗೆಡಿಸುತ್ತಿದೆ. ಪ್ರತಿ ಗ್ರಾಮಗಳಲ್ಲಿ ಜನರಿಗೆ ಅಗತ್ಯವಾಗಿ ಮೂಲ ಸಮಸ್ಯೆಗಳು ಬೃಹದಾಕಾರವಾಗಿವೆ. ಇದನ್ನು ನಿಷ್ಠೆಯಿಂದ ಬಗೆಹರಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಬೇಕು. ಜನರೊಂದಿಗೆ ಸ್ಪಂದಿಸುವವರರನ್ನು ಜನರು ಎಂದಿಗೂ ಕೈಬಿಡಲಾರರು ಎಂದರು.
 ಜೆಡಿಎಸ್ ಮುಖಂಡ ರಂಜನ್ ಅಜಿತ್ ಕುಮಾರ್, ತಾಪಂ ಮಾಜಿ ಉಪಾಧ್ಯಕ್ಷೆ ಸುಮತಿ ಸುರೇಶ್, ಕಿರುಗುಂದ ಗ್ರಾಪಂ ಅಧ್ಯಕ್ಷ ಯು.ಎಚ್. ರಾಜಶೇಖರ್, ಮಾಜಿ ಅಧ್ಯಕ್ಷ ಎಂ.ಆರ್. ನಝೀರ್, ನೇಮ್‌ರಾಜ್, ವಾಣಿಶಿವರಾಮ್ ಉದುಸೆ ರಘು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.