ಮಕ್ಕಳ ವಿಕಾಸಕ್ಕೆ ಶಿಬಿರಗಳು ಸಹಕಾರಿ
ಕ.ಪ್ರ.ವಾರ್ತೆ, ಬೀರೂರು, ಜೂ.2
ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಬೇಸಿಗೆ ಶಿಬಿರಗಳು ಸಹಕಾರಿಯಾಗಿ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಲು ಸಹಾಯಕವಾಗುತ್ತವೆ ಎಂದು ಪಟ್ಟಣದ ಕ್ರಿಸ್ತ ಶರಣ ಸಮಾಜ ವಿಕಾಸ ಸಂಸ್ಥೆಯ ಮುಖ್ಯಸ್ಥ ಜ್ಯೋ ಮೇರಿ ಲೋಬೋ ತಿಳಿಸಿದ್ದಾರೆ.
ಅವರು ಪಟ್ಟಣದ ಕ್ರಿಸ್ತ ಶರಣ ವಿಕಾಸ ಸಂಸ್ಥೆಯಲ್ಲಿ 10 ದಿನಗಳ ಕಾಲ ಬೆಂಗಳೂರಿನ ಬಾಲಭವನ ಸೋಸೈಟಿ, ಕಡೂರಿನ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಬೀರೂರಿನ ಕ್ರಿಸ್ತ ಶರಣ ಸಮಾಜ ವಿಕಾಸ ಸಂಸ್ಥೆ ಇವರ ಸಹ ಯೋಗದಲ್ಲಿ 5 ರಿಂದ 16 ವರ್ಷದ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತಿಥಿಗಳಾಗಿದ್ದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ ಮಾತನಾಡಿ, ಬಾಲಭವನ ಸೊಸೈಟಿಯಿಂದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳು ಕರಕುಶಲ, ಚಿತ್ರಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಯೋಗ ಇತ್ಯಾದಿ ವಿಷಯಗಳಲ್ಲಿ 10 ದಿನಗಳ ಕಾಲ ಸುಮಾರು 50 ಮಕ್ಕಳಿಗೆ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ವಿಕಾಸಕ್ಕೆ ಸಹಕಾರಿಯಾಗಲು ಈ ಶಿಬಿರ ಏರ್ಪಡಿಸಿರುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕ್ರಿಸ್ತ ಶರಣ ಸಂಸ್ಥೆಯ ಸಿಸ್ಟರ್ ತಾರಾ, ಸಿಸ್ಟರ್ ಭಾರತಿ, ಸಿಸ್ಟರ್ ಮಕ್ತಿ ಮತ್ತು ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ್ ಉಪಸ್ಥಿತರಿದ್ದು ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳು ತಾವು ಕಲಿತ ನೃತ್ಯ ಇನ್ನಿತರ ಉತ್ತಮ ಚಟುವಟಿಕೆಗಳನ್ನು ಅಭಿನಯಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

