11ಕ್ಕೆಆರೋಗ್ಯ ತಪಾಸಣಾ ಶಿಬಿರ
ಚಿಕ್ಕಮಗಳೂರು: ರಾಷ್ಟ್ರೀಯ ಮಧುಮೇಹ, ಕ್ಯಾನ್ಸರ್, ಹೃದಯ ಸಂಬಂಧಿತ (ಸಿವಿಡಿ) ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು 11ರಂದು ಹಮ್ಮಿಕೊಳ್ಳಲಾಗಿದೆ. ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಮತ್ತು ಜೆಸಿಐ ಕಲ್ಪವೃಕ್ಷ ಕಡೂರು ಇವರ ಸಂಯುಕ್ತಾಶ್ರಯದಲ್ಲಿ ತಜ್ಞ ವೈದ್ಯರರಿಂದ ಉಚಿತ ಕ್ಯಾನ್ಸರ್ ರೋಗ ಪತ್ತೆ ಹಚ್ಚುವ ಹಾಗೂ ಸಲಹಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳುಗಳು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಎಕ್ಸಾಮಿನೇಷನ್ (ಸಿಡಿಎಸ್‌ಗೆ) ಭಾರತೀಯ ಸೇನಾಪಡೆ, ಅಕಾಡೆಮಿ, ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ವಿವಿಧ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪದವಿ ಅಥವಾ ಎಂಜಿನಿಯರಿಂಗ್ ಪದವಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಜಾರಿಯಾಗದ ಕಾಯ್ದೆ: ವಿಷಾದ
ಸೊರಬ: ಜೀತಮುಕ್ತ ಕಾಯ್ದೆ ಅನುಷ್ಠಾನಗೊಂಡು 3 ದಶಕ ಕಳೆದರೂ ಫಲಪ್ರಧವಾಗಿ ಜಾರಿಯಾಗದಿರುವುದು ನೋವಿನ ಸಂಗತಿ ಎಂದು ರಾಜ್ಯ ಜೈವಿಕ ಸಂಚಾಲಕ ಬಿ. ಉಮೇಶ್ ನೂರಲಕಪ್ಪೆ ತಿಳಿಸಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

