ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ: ಶಿವಣ್ಣ
ಕಡೂರು: ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವ ಕಾರಣ ರೈತರ ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ.
ತಾಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ಔಷಧಿ ಮತ್ತು ಸಹಕಾರ ಸಂಘಗಳಲ್ಲಿ ಅಗತ್ಯ ಗೊಬ್ಬರದ ದಾಸ್ತಾನು ಮಾಡಲಾಗಿದೆ. ತಾಲೂಕಿನಲ್ಲಿರುವ 69 ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ 9,350 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಹಂಗಾಮು ಬಿತ್ತನೆ ಚುರುಕುಗೊಂಡಿದೆ ಎಂದು ಹೇಳಿದ್ದಾರೆ.
ಹೆಸರು, ಉದ್ದು, ತೊಗರಿ, ಹಲಸಂದೆ, ಎಳ್ಳು, ಹತ್ತಿ, ನೆಲಗಡಲೆ ಸೂರ್ಯಕಾಂತಿ, ಹೈಬ್ರೀಡ್, ಜೋಳ, ಮುಸುಕಿನ ಜೋಳ, ಹರಳು ಸೇರಿದಂತೆ ವಿವಿಧ ಕಾಳಿನ ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ ಎಂದರು.
ವಾಡಿಕೆಯಂತೆ 131 ಮಿ.ಮೀ ಮಳೆ ಬರಬೇಕಿದ್ದು, ಆದರೆ ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ 147 ಮಿ.ಮೀ ಮಳೆಯಾಗಿದೆ. ಇದು ರೈತರಲ್ಲಿ ಸಂತಸ ತಂದಿದೆ. ಉತ್ತಮ ಮಳೆ ಆಗಿರುವ ಹಿನ್ನೆಲೆಯಲ್ಲಿ ಉತ್ತಮ ಫಸಲಿನ ನಿರೀಕ್ಷೆಯಿದೆ ಎಂದು ತಿಳಿಸಿದ ಶಿವಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಸಹಕಾರ ಸಂಘಗಳಲ್ಲಿ ರೈತರಿಗೆ ವಿತರಿಸಲಾಗುವ ಗೊಬ್ಬರವನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಹಣ ಪಡೆದಲ್ಲಿ ರೈತರು ದೂರು ನೀಡಿ ಎಂದ ಅವರು, ಅಂತಹ ಸಂಘಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ನಿಗದಿತ ದರವನ್ನು ಮಾತ್ರ ಪಡೆದು ಗೊಬ್ಬರ ವಿತರಿಸಬೇಕು ಎಂದು ಸಂಘಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

