ಕಂಡ ಕಂಡಲ್ಲಿ ಕಸದ ರಾಶಿ
ಮೂಡಿಗೆರೆ, ಜೂ.3 ಪಟ್ಟಣದ ಮುಖ್ಯರಸ್ತೆ ಸೇರಿದಂತೆ ವಿವಿಧ ಬೀದಿಗಳಲ್ಲಿ ಕಸದ ರಾಶಿಯಿಂದಾಗಿ ಗಬ್ಬು ವಾಸನೆ ಹೆಚ್ಚಾಗಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಪ್ರಾರಂಭವಾಗುತ್ತಿರುವ ಹೊತ್ತಿನಲ್ಲಿ ಪಟ್ಟಣದಲ್ಲಿ ಅಲ್ಲಲ್ಲಿ ಕಸದ ರಾಶಿ ಬೀಳುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಸಾರ್ವಜನಿಕರನ್ನು ಕಂಗಾಲು ಮಾಡುತ್ತಿದೆ.
ಪಟ್ಟಣದ ಪ್ರಮುಖ ರಸ್ತೆಯಾದ ಕಡೂರು-ಮಂಗಳೂರು ರಾಜ್ಯ ಹೆದ್ದಾರಿ ಬದಿಯಲ್ಲಿ ಉದ್ದಗಲಕ್ಕೂ ರಾಶಿಗಟ್ಟಲೆ ಕಸ ಹಾಗೂ ಪ್ಲಾಸ್ಟಿಕ್ ರಾಶಿಗಳೇ ಬಿದ್ದಿದ್ದರೂ, ಸ್ಥಳೀಯ ಪಪಂ ವಿಲೇವಾರಿಗೆ ಮುಂದಾಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ಲಾಸ್ಟಿಕ್ ತ್ಯಜಿಸಲು ಮನವಿ: ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವಂತೆ ಈ ಹಿಂದೆ ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಅಂಗಡಿಗಳಿಗೆ ಭೇಟಿ ಮಾಡಿ. ಪ್ಲಾಸ್ಟಿಕ್ ತ್ಯಜಿಸುವಂತೆ ಮನವಿ ಮಾಡಿಕೊಳ್ಳುವುದರ ಮೂಲಕ ಗ್ರೇಡ್ ಕಡಿಮೆ ಇರುವ ಪ್ಲಾಸ್ಟಿಕ್ವಶಕ್ಕೆ ತೆಗೆದುಕೊಂಡು ದಂಡ ವಿಧಿಸಿದ್ದರು.
ನಂತರ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಸ್ತೆಯ ಬದಿಯಲ್ಲೆ ಕಡಿಮೆ ಗ್ರೇಡಿನ ಪ್ಲಾಸ್ಟಿಕ್ ಮಾರಾಟವಾಗುತ್ತಿದ್ದರೂ, ತಮಗೂ ಅದಕ್ಕೂ ಸಂಬಂಧವೇ ಇಲ್ಲವೆಂಬಂತೆ ಇರುವವರೇ ಹೆಚ್ಚು. ಪಟ್ಟಣದ ರಸ್ತೆ ಕಿರಿದಾಗಿದ್ದು, ವಾಹನ ಮತ್ತು ಜನ ಸಂಚಾರಕ್ಕೆ ಅನುಕೂಲಕರವಾಗಲೆಂದು ರಸ್ತೆ ಬದಿಯ ಪೆಟ್ಟಿಗೆ ಅಂಗಡಿಗಳನ್ನು ಈ ಹಿಂದೆ ತೆರವುಗೊಳಿಸಲಾಗಿತ್ತು.
ಈ ಹಂತದಲ್ಲಿ ಸ್ಥಳೀಯಾಡಳಿತದ ಮುಖ್ಯಾಧಿಕಾರಿ ಸಹಿತ ಅಧಿಕಾರಿಗಳು, ಸಿಬ್ಬಂದಿ, ಪಟ್ಟಣದ ನಿರ್ವಹಣೆ ನಡೆಸುತ್ತಿದ್ದಾರೆ. ಅವರ ಬೇಜವಾಬ್ದಾರಿತನದಿಂದ ಕಸ ವಿಲೇವಾರಿ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದ್ದಾರೆ. ಗುತ್ತಿಗೆದಾರರು ಪೌರ ಕಾರ್ಮಿಕರ ಕೊರತೆಯನ್ನು ಬಂಡವಾಳ ಮಾಡಿಕೊಂಡು ತಿಪ್ಪೆ ಸಾರಿಸುವ ಪ್ರಯುತ್ನ ನಡೆಸುತ್ತಿರುವ ಆರೋಪಗಳು ಕೇಳಿ ಬರುತ್ತಿವೆ.
ಕಸ ಎತ್ತುವಾಗ ಬಳಸುವ ಕೈ, ಕಾಲು ಕವಚ ಸಹಿತ ಇನ್ನಿತರೆ ಅಗತ್ಯ ಸೌಕರ್ಯಗಳನ್ನು ಪೌರ ಕಾರ್ಮಿಕರಿಗೆ ಪಪಂ ನೀಡದಿರುವ ಆರೋಪಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

