ಚಿಕ್ಕಮಗಳೂರು

8 ರಂದು ಕಾಂಗ್ರೆಸ್ ಅಭಿನಂದನೆ

Published On :

ಕೊಪ್ಪ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಟಿ.ಡಿ. ರಾಜೇಗೌಡ ಅವರು ತಮಗೆ 54 ಸಾವಿರಕ್ಕೂ ಹೆಚ್ಚು ಮತ ನೀಡಿದ ಮತದಾರಿಗೆ ಹಾಗೂ ಚುನಾವಣೆಯಲ್ಲಿ ಶ್ರಮಿಸಿ, ಸಹಕರಿಸಿದ ಮುಖಂಡರು, ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭ ಜೂನ್ 8 ರಂದು ಬೆಳಗ್ಗೆ 11 ಗಂಟೆಗೆ ಕೊಪ್ಪ ಪುರಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶೋಭಿಂತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.  ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್,ಸಂಸದ ಜಯಪ್ರಕಾಶ ಹೆಗ್ಡೆ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಲ್.ಎಂ,ಮೂರ್ತಿ ಸೇರಿದಂತೆ ಪಕ್ಷದ ಮುಖಂಡರುಗಳು ಭಾಗವಹಿಸಲಿದ್ದಾರೆ.
ತಾಲೂಕಿನೆಲ್ಲೆಡೆ ಮುಂಗಾರು ಚುರುಕು
ಶೃಂಗೇರಿ: ತಾಲೂಕಿಗೆ ಭಾನುವಾರದಿಂದ ಮುಂಗಾರು ಪ್ರವೇಶಗೊಂಡಿದ್ದು, ತಾಲೂಕಿನಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಭಾನುವಾರ ರಾತ್ರಿಯಿಂದ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಸೋಮವಾರದವೂ ಮುಂದುವರೆದಿತ್ತು. ಉತ್ತಮ ಮಳೆಯಾಗುತ್ತಿರುವುದರಿಂದ ರೈತರು ಹರ್ಷದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಸಿಮುಡಿ ಕೆಲಸಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಸತತ ಮಳೆಯಿಂದ ಬತ್ತಿ ಹೋಗಿದ್ದ ಕೆರೆ, ಹಳ್ಳ, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತುಂಗಾ ನದಿ ಜೀವಕಳೆ ತುಂಬಿ ಹರಿಯುತ್ತಿದೆ. ನಿರೀಕ್ಷೆಯಂತೆ ಈ ಬಾರಿ ಬಹುಬೇಗ ಮುಂಗಾರು ಪ್ರವೇಶಗೊಂಡಿದೆ. ಸೋಮವಾರವೂ ಗಾಳಿಮಳೆ ಆರ್ಭಟ ಮುಂದುವರೆದಿತ್ತು.
ಶಾಲಾ ಪ್ರಾರಂಭೋತ್ಸವ
ಚಿಕ್ಕಮಗಳೂರು: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಬಸವರಾಜ್ ಹೇಳಿದ್ದಾರೆ.
ನಗರದ ಆಜಾದ್ ಪಾರ್ಕ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಹೆಚ್ಚಾಗಿ ಸೇರಿಸುವಂತಾಗಬೇಕು. ಇಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತವರೆಲ್ಲ ದಡ್ಡರಲ್ಲ. ತಮ್ಮೂರ ಶಾಲೆಯಲ್ಲಿ ಕಲಿತ ಯುವಕ ಐಪಿಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಜಿಲ್ಲಾ ಗಮಕ ಕಲಾಪರಿಷತ್ತು ಅಧ್ಯಕ್ಷ ರಾಮಸುಬ್ರಾಯ ಶೇಟ್ ವಿಶೇಷ ಉಪನ್ಯಾಸ ನೀಡಿ, ಮನುಷ್ಯರಿಗೆ ಆಹಾರ, ಗಾಳಿ, ನೀರಿನಂತೆ ವಿದ್ಯೆಯೂ ಅನಿವಾರ್ಯ. ಸರ್ಕಾರಿ ಶಾಲಾ ಶಿಕ್ಷಕರು ಖಾಸಗಿ ಶಾಲೆಗಳಿಗಿಂತ ಹೆಚ್ಚು ಅನುಭವಸ್ಥರಿರುತ್ತಾರೆ. ಶ್ರದ್ಧೆ ಮತ್ತು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.