ನಿರ್ಬಂಧಿತ ರಸ್ತೆಯಲ್ಲೇ ಅಕ್ರಮ ಮರಳು ಸಾಗಾಟ: ಆರೋಪ
ಕ.ಪ್ರ.ವಾರ್ತೆ ಮೂಡಿಗೆರೆ ಜೂ.5 ಕಾಂಕ್ರಿಟ್ ಕಾಮಗಾರಿ ನಡೆಯುತ್ತಿರುವ ಮೂಡಿಗೆರೆ ಪಟ್ಟಣದ ಕೆ.ಎಂ. ರಸ್ತೆ ಸಂಚಾರವನ್ನು ಬದಲಿಸಿ ಜಿಲ್ಲಾಧಿಕಾರಿ ಪಿ. ಯಶ್ವಂತ್ರವರು ಮೇ.24ರಂದು ಹೊರಡಿಸಿರುವ ಆದೇಶವನ್ನು ಅಧಿಕಾರಿಗಳೇ ಪೊಲೀಸರ ಸಮಕ್ಷಮದಲ್ಲೇ ಸ್ಪಷ್ಟವಾಗಿ ಉಲ್ಲಂಘಿಸುತ್ತಿದ್ದು, ಅದರಲ್ಲೂ ಅಕ್ರಮ ಮರಳು ಸಾಗಣಿಕೆಯನ್ನು ಕಂಡೂ ಕಾಣದಂತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ತಾಲೂಕಿನ ಹೇಮಾವತಿ ನದಿಯಲ್ಲಿ ಮರಳು ಟೆಂಡರ್ ಪಡೆಯದಿದ್ದರೂ ಗಣಿಗಾರಿಕೆ ಮತ್ತು ಸಾಗಾಟ ಕಡಿಮೆಯಾಗಿಲ್ಲ. ಅಕ್ರಮ ಮರಳು ಸಾಗಾಣಿಕೆ ವ್ಯಾಪಕವಾಗಿ ನಡೆಯುತ್ತಿರುವುದನ್ನು ಅಧಿಕಾರಿಗಳ ಸಹಿತೊಪಲೀಸರು ಕಣ್ಣೆದುರು ಕಂಡರೂ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.
ಅಕ್ರಮ ಸಾಗಾಟ: ನದಿಯಿಂದ ಹಗಲಿರುಳೂ ಟ್ರ್ಯಾಕ್ಟರ್ಗಳಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಅದೂ ಅಲ್ಲದೆ ಕಾಂಕ್ರಿಟ್ ಕಾಮಗಾರಿ ನಡೆಯುತ್ತಿರುವ ಗಂಗನಮಕ್ಕಿ ರಸ್ತೆಯಲ್ಲಿ ಲೋಕೋಪಯೋಗಿ, ಪಪಂ ಅಧಿಕಾರಿಗಳ ಸಹಿತ ಪೊಲೀಸರೇ ಮುಂದೆ ನಿಂತು ಅಕ್ರಮ ಸಾಗಾಟ ನಡೆಸುತ್ತಿರುವುದು ಕಂಡು ಬರುತ್ತಿದೆ.
ಅಕ್ರಮ ಮರಳು ಸಾಗಾಣಿಕೆ ತಡೆಗೆ ಉಸ್ತುವಾರಿ ಸಮಿತಿ ರಚಿಸಲಾಗಿದೆ. ಅದರಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾದರೆ, ಕಾರ್ಯದರ್ಶಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಯವರಾಗಿದ್ದಾರೆ. ಸದಸ್ಯರಾಗಿ ಲೋಕೋಪಯೋಗಿ, ಕಂದಾಯ, ಅರಣ್ಯ, ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ಸಮಿತಿಯಲ್ಲಿವೆ.
ಕ್ರಮವಿಲ್ಲ: ಆದರೆ ಈ ಎಲ್ಲಾ ಇಲಾಖೆಗಳ ಅಧಿಕಾರಿಗಳ ಕಣ್ಣೆದುರಿನಲ್ಲಿಯೇ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಅಸಹನೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

