ಪರಿಸರ ಅಸಮತೋಲನ; ಬಿಸಿಯೇರಿದ ವಾತಾವರಣ
ಚಿಕ್ಕಮಗಳೂರು: ತಣ್ಣನೆಯ ವಾತಾವರಣಕ್ಕೆ ಖ್ಯಾತಿಗೊಂಡಿರುವ ಮಲೆನಾಡು ಪ್ರದೇಶದಲ್ಲಿ ತೀವ್ರ ಸೆಖೆ ವಾತಾವರಣ ಸೃಷ್ಟಿಯಾಗಿ ಮನೆ, ಕಚೇರಿ, ವಾಹನಗಳಲ್ಲಿ ಹವಾ ನಿಯಂತ್ರಿತ ಉಪಕರಣಗಳನ್ನು ಬಳಸುವ ಸನ್ನಿವೇಶ ಸೃಷ್ಟಿಯಾಗಿರುವುದು ಕಳವಕಳಕಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಧೀಶರಾದ ಬಸವರಾಜ್ ಎ. ಪಾಟೀಲ್ ಆತಂಕ ವ್ಯಕ್ತಪಡಿಸಿದರು.
ಬುಧವಾರ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಮಾಡೆಲ್ ಶಾಲಾ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಉಧ್ಘಾಟಿಸಿ ಮಾತನಾಡಿದರು. ಹೆಚ್ಚುತ್ತಿರುವ ಮಾಲಿನ್ಯದಿಂದ ಪರಿಸರದ ಸತ್ವ ತೀವ್ರ ಕುಸಿಯುವವ ಮೂಲಕ ಇದು ನೇರವಾಗಿ ಮನುಷ್ಯನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಉಸಿರಾಡಲು ಉತ್ತಮ ಗಾಳಿಗಾಗಿ ಪರದಾಡಬೇಕಾದ ಸ್ಥಿತಿ ಉಂಟಾಗಿದೆ. ಕೃಷಿ ಕಾರ್ಯಗಳಲ್ಲಿ ಹೆಚ್ಚುತ್ತಿರುವ ರಸ ಗೊಬ್ಬರಗಳ ಬಳಕೆಯಿಂದ ಜೀವ ಸಂಕುಲಗಳ ಬೆಳವಣಿಗೆಗೆ ಅಡ್ಡಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಉತ್ತೇಜನ: ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಪರಿಸರದ ಮೇಲೆ ಪ್ರತಿಕೂಲ ಸ್ಥಿತಿ ಇಲ್ಲದಿದ್ದರೂ ಸಸಿ ನೆಡುವ ಕಾರ್ಯಕ್ರಮಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿತ್ತು. ಭಾರತದ ಸಂವಿಧಾನದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವೇ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರು ಕನಿಷ್ಟ ತಮ್ಮ ಮನೆಯ ಆಸುಪಾಸಿನಲ್ಲಿ ಉತ್ತಮ ಪರಿಸರವನ್ನು ಸೃಷ್ಟಿಸುವುದು ಅವಶ್ಯಕತೆಯಿದೆ ಎಂದು ಹೇಳಿದರು.
ರಾಷ್ಟ್ರೀಯ ಅರಣ್ಯ ನೀತಿ: ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರವಿರಾಜ್ ನಾರಾಯಣ್ ಮಾತನಾಡಿ, ದೇಶದ ಮೂರನೇ ಒಂದು ಭಾಗದಲ್ಲಿ ಅರಣ್ಯ ಪ್ರದೇಶ ಇರಬೇಕು ಎಂಬುದು ರಾಷ್ಟ್ರೀಯ ಅರಣ್ಯ ನೀತಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ 38ರಷ್ಟು ಅರಣ್ಯ ಪ್ರದೇಶ ಇದೆ. ಆಹಾರ ತಾಜ್ಯಗಳ ಪ್ರಮಾಣ ಏರಿಕೆಯಾಗುತ್ತಿರುವುದು ಕಳವಳಕಾರಿಯಾಗುತ್ತಿದೆ. ಒಂದೆಡೆ ಆಹಾರ ತಾಜ್ಯ ಏರಿಕೆಯಾಗುತ್ತಿದ್ದರೆ ಇನ್ನೊಂದೆಡೆ ದಿನದ ಊಟಕ್ಕೂ ಗತಿಯಿಲ್ಲದೇ ಸಾಯುತ್ತಿರುವವರ ಸಂಖ್ಯೆ ಮತ್ತು ಪ್ರಕರಣಗಳು ಹೆಚ್ಚುತ್ತಿರುವುದು ವಿಪರ್ಯಾಸ ಎಂದು ಹೇಳಿದರು. ಹಿರಿಯ ಸಿವಿಲ್ನ್ಯಾಯಾಧೀಶರಾದ ಎಂ. ಮಹದೇವಯ್ಯ ಮತ್ತು ಪರಿಸರ ಅಧಿಕಾರಿ ಎಂ.ಎನ್. ಯೋಗಾನಂದ ಮಾತನಾಡಿದರು.
ಪ್ರಾಂಶುಪಾಲ ಎಂ.ಎನ್. ಷಡಾಕ್ಷರಿ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ಅಬ್ದುಲ್ ಜಬ್ಬಾರ್, ವಾರ್ತಾಧಿಕಾರಿ ಖಾದರ್ ಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗೇಶ್, ಎಸ್ಸಿಎಫ್ ಶಶಿಧರ್, ಆರ್ಎಫ್ಒ ಜಯಕುಮಾರ್, ಪರಿಸರವಾದಿ ಗಿರೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

