ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಶೃಂಗೇರಿ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ತಾಲೂಕು ಬಿಜೆಪಿ ಘಟಕದ ವತಿಯಿಂದ ಜೂ.6ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು ನಂತರ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಗುಟ್ಕಾ ನಿಷೇಧಿಸಿರುವ ಕ್ರಮವನ್ನು ಖಂಡಿಸಲಾಗುವುದು.
ಪಕ್ಷದ ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ತಾಪಂ ಸರ್ವ ಸದಸ್ಯರ ಸಭೆ
ಶೃಂಗೇರಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಪಂ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿದೆ.
ಸಭೆ ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ತಾಪಂ ಅಧ್ಯಕ್ಷೆ ಶಾರದಾ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿದೆ.
ಪರಿಹಾರದ ಚೆಕ್ ವಿತರಣೆ
ಕೊಪ್ಪ: ತಾಲೂಕಿನ ಕೆಸವೆ ಗ್ರಾಮದ ರೈತ ಶ್ರೀಕಂಠ ಎಂಬುವರು ಅಡಕೆ ಮರದಿಂದ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿಡ್ಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮ್ಯಾಮ್ಕೋಸ್‌ನ ಗುಂಪು ವಿಮಾಯೋಜನೆಯಡಿಯಲ್ಲಿ ರು. 1 ಲಕ್ಷ ಪರಿಹಾರದ ಚೆಕ್ಕನ್ನು ಬುಧವಾರ ಮ್ಯಾಮ್‌ಕೋಸ್ ನಿರ್ದೇಶಕ ಯಡಗೆರೆ ಸುಬ್ಬಣ್ಣ, ಬಿ.ಸಿ. ನರೇಂದ್ರ ಮೊದಲಾದವರು ನೀಡಿದರು.
ದೇವರಾಜ ಅರಸು
ಪುಣ್ಯಸ್ಮರಣೆ
ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 31 ನೇ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿದೆ ಎಂದು ವಿಭಾಗದ ಜಿಲಾಧ್ಯಕ್ಷ ಕೆ.ಎನ್. ನಾಗರಾಜ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಜೂನ್ 6 ರಂದು ಸಂಜೆ 5.30 ಕ್ಕೆ ನಗರದ ಬಾರ್ ಲೈನ್ ರಸ್ತೆಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ ಸಿದ್ದಾರ್ಥ, ವಕ್ತಾರ ಎ.ಎನ್. ಮಹೇಶ್, ನಗರಾಧ್ಯಕ್ಷ ಶ್ರೀಧರ್ ಉರಾಳ್ ಸೇರಿದಂತೆ ಅನೇಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

