ಇಂದು ತಾಪಂ ಸಾಮಾನ್ಯ ಸಭೆ
ನರಸಿಂಹರಾಜಪುರ: ತಾಪಂ ಅಧ್ಯಕ್ಷ ಜೆ.ಜಿ.ನಾಗರಾಜ್ ಅಧ್ಯಕ್ಷತೆಯಲ್ಲಿ 7 ರ ಬೆಳಿಗ್ಗೆ 11 ಗಂಟೆಗೆ ತಾಪಂ ಸಾಮಾರ್ಥ್ಯ ಸೌಧದಲ್ಲಿ ತಾಪಂ ಸರ್ವ ಸದಸ್ಯರ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಲೂಕಿನಲ್ಲಿ ಸಾಧಾರಣ ಮಳೆ
ಶೃಂಗೇರಿ: ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸಾದಾರಣ ಮಳೆ ಬಿದ್ದಿದೆ. ಕಳೆದೆರೆಡು ದಿನಗಳಿಂದ ಬಿಸಿಲ ವಾತಾವರಣವಿದ್ದು, ಗುರುವಾರ ಬೆಳಿಗ್ಗೆಯಿಂದ ಬಿಸಿಲು, ಆಗಾಗ ಮೋಡಕವಿದ ವಾತಾವರಣ ಉಂಟಾಗಿದ್ದು ಸಂಜೆ ವೇಳೆಗೆ ಸಾದಾರಣ ಮಳೆ ಬಿದ್ದಿತು.
ಮಲೆನಾಡಲ್ಲಿ ಮಳೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಗುರುವಾರ ಸಾಧಾರಣ ಮಳೆ ಬಂದಿತು.
ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ ಸೇರಿದಂತೆ ಹಲವೆಡೆ ತುಂತುರು ಮಳೆ ಬಂದಿದ್ದು, ಮುಂಗಾರಿನ ವೈಭವ ಮರುಕಳಿಸಿತ್ತು. ಕೆಲವು ದಿನಗಳಿಂದ ಜಿಲ್ಲೆಯ ಬಯಲುಸೀಮೆ ಸೇರಿದಂತೆ ಮಲೆನಾಡಿನಲ್ಲೂ ಮಳೆ ಬರುತ್ತಿದ್ದು, ಗುರುವಾರ ಮಧ್ಯಾಹ್ನ ಸುಮಾರು ಒಂದು ಗಂಟೆಗೂ ಅಧಿಕ ಕಾಲ ತುಂತುರು ಮಳೆ ಬಂದಿತು.
ತರಬೇತಿ
ಕಡೂರು: ತಾಲೂಕು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಆನ್ಲೈನ್ ಮೂಲಕ ಗ್ರಾಮಾಂತರ ಪ್ರದೇಶಗಳ ಪಡಿತರ ಚೀಟಿ ನವೀಕರಣ ಮತ್ತು ಹೊಸ ಪಡಿತರ ಚೀಟಿಗಳ ನೋಂದಣಿ ಕುರಿತ ತರಬೇತಿ ಕಾರ್ಯಾಗಾರ ನಡೆಯಿತು.
ತಾಪಂ ಸಭಾಂಗಣದಲ್ಲಿ ತಾಪಂ ಕಾರ್ಯ ನಿರ್ವಾಹಣಾಧಿಕಾಕರಿ ಟಿ.ಎನ್. ಮೂರ್ತಿ ಅಧ್ಯಕ್ಷತೆಯಲ್ಲಿ ಆಹಾರ ನಿರೀಕ್ಷಕ ರಂಗನಾಥ್, ಚಂದ್ರಮೂರ್ತಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಕಾರ್ಯಕ್ರಮ ಅನುಷ್ಠಾನ
ಅಧಿಕಾರಿ ಸತೀಶ್ಕುಮಾರ್ ಸಮ್ಮುಖದಲ್ಲಿ ಗ್ರಾಪಂ ಅಧಿಕಾರಿಗಳಿಗೆ ಪಡಿತರ ಚೀಟಿಗಳ ನೋಂದಣಿ ಬಗ್ಗೆ ಮಾರ್ಗದರ್ಶನ ಹಾಗೂ ತರಬೇತಿ ಮಾಹಿತಿ ನೀಡಲಾಯಿತು.
ಕಡ್ಡಾಯ ನೋಂದಣಿ: ತಾಲೂಕು ಆಹಾರ ಶಿರಸ್ತೇದಾರ ರಂಗನಾಥ್ ಮಾತನಾಡಿ, ಸರ್ಕಾರಿ ಆದೇಶದಂತೆ ಸರ್ಕಾರ ಪಟ್ಟಣ ಪ್ರದೇಶಗಳಲ್ಲಿ ಖಾಸಗಿ ಸೈಬರ್ ಕೆಫೆಗಳಲ್ಲಿ 2010ರ ಹಿಂದಿನ ಪಡಿತರ ಚೀಟಿಗಳ ನವೀಕರಣ ಮತ್ತು ಹೊಸ ಕಾರ್ಡುಗಳಿಗೆ ಹೊಸ ಅರ್ಜಿ ಸಲ್ಲಿಸುವಂತೆ ನಿಗದಿಪಡಿಸಿದ್ದು, ಗ್ರಾಪಂ ಮಟ್ಟದಲ್ಲಿ ಗ್ರಾಪಂ ಮೂಲಕವೇ ನೋಂದಣಿ ಮಾಡಬೇಕೆಂಬ ಆದೇಶ ಹೊರಡಿಸಿರುವುದರಿಂದ ಕಡ್ಡಾಯ ನೋಂದಣಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಆಗ ಕೆಲ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕೇವಲ ಪಡಿತರ ಚೀಟಿಗಳ ನೋಂದಣಿ ಮಾಡುತ್ತಲೇ ಇದ್ದರೆ ಪಂಚಾಯ್ತಿಗೆ ಸಂಬಂಧಿಸಿದ ಕೆಲಸ ಕಾರ್ಯ ಮಾಡವುದಾದರೂ ಹೇಗೆ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

