ಚಿಕ್ಕಮಗಳೂರು

ಪರಿಸರ ರಕ್ಷಣೆಗೆ ಕಂಕಣಬದ್ಧರಾಗಿ: ಯೋಗಾನಂದ್

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜೂ.6
ಮಾನವನ ಅಸ್ಥಿತ್ವಕ್ಕೆ ಕಾರಣವಾಗಿರುವ ಪರಿಸರವನ್ನು ಅಳಿವಿನ ಅಂಚಿಗೆ ಕರೆದೊಯ್ದು ಬೀಗುತ್ತಿರುವುದು ಸರಿಯಲ್ಲ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಯೋಗನಂದ್ ಹೇಳಿದ್ದಾರೆ.
ಸರಪನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲೆಯ ನೂತನ ವಿಜ್ಞಾನ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಜೆಸಿಐ ಅಧ್ಯಕ್ಷ ಪಿ.ಎಂ. ಸುಧಾಕರ್, ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲ ವೇಣು ವಿಜ್ಞಾನ ಸಂಘದ ಅವಶ್ಯಕತೆ ಮತ್ತು ಮಹತ್ವವನ್ನು ಶಾಲಾ ಮಕ್ಕಳಿಗೆ ಸವಿಸ್ತಾರವಾಗಿ ತಿಳಿಸಿದರು. ವಿಜ್ಞಾನ ಶಿಕ್ಷಕ ವಿಜಯಕುಮಾರ್ ಪ್ಲಾಸ್ಟಿಕ್ ಮುಕ್ತ ಶಾಲೆಯನ್ನಾಗಿಸಲು ಪ್ರತಿಜ್ಞಾವಿಧಿಬೋಧಿಸಿದರು. ಶಿಕ್ಷಕರು, ಬೋಧಕೇತರ ಶಿಕ್ಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.