ಚಿಕ್ಕಮಗಳೂರು

ಉಚಿತ ಪಠ್ಯ ಪುಸ್ತಕ ವಿತರಣೆ

Published On :

ಬಾಳೆಹೊನ್ನೂರು: ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಜಿ.ಪಂ. ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಸುವರ್ಣ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳನ್ನು ಶಿಕ್ಷಣಕ್ಕೆ ಪ್ರೇರೇಪಿಸುವ ಮಹತ್ತರ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಿ. ಕಣಬೂರು ಗ್ರಾಪಂ ಉಪಾಧ್ಯಕ್ಷೆ ಎನ್.ಎ. ಹೂವಮ್ಮ ಪರಮೇಶ್ವರ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾಗೇಶ್, ಸುರೇಶ್ ಉಪಸ್ಥಿತರಿದ್ದರು. ಪಂಚಾಕ್ಷರ ಕುಮಾರ್ ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಕಳಸಪ್ಪ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ತಮ್ಮಯ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.