ಸುದ್ದಿ ಸಂಕ್ಷೇಪ
ಇಂದು ಬಿಜೆಪಿ ಚಿಂತನ ಮಂಥನ
ಕಡೂರು: ಪಟ್ಟಣದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಚಿಂತನ ಮಂಥನ ಸಭೆ ಜೂ.8ರ ಶನಿವಾರ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರೇಕಲ್ ಪ್ರಕಾಶ್, ಚಿಂತನ ಮಂಥನ ಸಭೆ ಕಡೂರು ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಬೆಳಗ್ಗೆ 11.30ಕ್ಕೆ ಆರಂಭವಾಗಲಿದೆ. ಸಭೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ ವೈ.ಸಿ. ವಿಶ್ವನಾಥ್, ಬಿಜೆಪಿ ಮುಖಂಡ ಬೀರೂರು ದೇವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್, ರಾಜ್ಯ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ್, ಕಡೂರು ಕ್ಷೇತ್ರದ ಎಲ್ಲ ಹೋಬಳಿಗಳ ಬಿಜೆಪಿ ಮುಖಂಡರು, ಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗು ಬೂತ್ ಮಟ್ಟದ ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಸಭೆಗೆ ನಗರ ಗ್ರಾಮಾಂತರ ಪ್ರದೇಶದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಭೆ ಯಶಸ್ವಿಗೊಳಿಸಬೇಕು ಎಂದು ಪ್ರಕಾಶ್ ಮನವಿ ಮಾಡಿದ್ದಾರೆ.
ಧಾರಾಕಾರ ಮಳೆ
ಶೃಂಗೇರಿ: ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಶುಕ್ರವಾರ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಗುರುವಾರ ಸಂಜೆಯಿಂದ ಆರಂಭಗೊಂಡ ಮಳೆ ಶುಕ್ರವಾರವೂ ಮುಂದುವರೆದು ಧಾರಾಕಾರವಾಗಿ ಸುರಿಯಿತು. ಮಳೆ ರಭಸಕ್ಕೆ ಹಳ್ಳ, ಕಾಲುವೆ ಉಕ್ಕಿ ಹರಿಯುತ್ತಿದ್ದು, ತುಂಗಾ ನದಿಯಲ್ಲಿಯೂ ನೀರಿನ ಪ್ರಮಾಣ ಹೆಚ್ಚಿದೆ. ಕಳೆದೆರೆಡು ದಿನಗಳಿಂದ ಬಿಸಿಲ ವಾತಾವರಣವಿತ್ತು. ಆದರೆ ಗುರುವಾರ ಸಂಜೆಯಿಂದ ಮಳೆಗಾಲದ ವಾತಾವರಣ ಉಂಟಾಗಿದೆ. ಮಂಗಳೂರು ಶಿವಮೊಗ್ಗ ರಾ.ಹೆ.13 ರ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಬಳಿ ಶುಕ್ರವಾರ ಬೆಳಗ್ಗೆ ಭಾರಿ ಮಳೆಗೆ ಭಾರಿ ಸರಕು ಹೊತ್ತೊಯ್ದ ಲಾರಿಯೊಂದು ತಿರುವಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದರಿಂದ ಸಂಚಾರ ಅಸ್ತವ್ಯಸ್ಥಗೊಂಡಿತು. ವಾಹನ ಸಂಚಾರವಿಲ್ಲದೆ ಪ್ರಯಾಣಿಕರು ಪರಾದಾಡುವ ಸ್ಥಿತಿ ಉಂಟಾಗಿತ್ತು.
ರೈಲಿಗೆ ಸಿಲುಕಿ ಸಾವು
ಶಿವಮೊಗ್ಗ: ಚಲಿಸುತ್ತಿರುವ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗದರ ಶೇಷಾದ್ರಿಪುರದ ಸಾಮಿಲ್ಬಳು ನಡೆದಿದೆ. ಮೃತಪಟ್ಟವರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಮೃತ ವ್ಯಕ್ತಿ ಸುಮಾರು 30 ವರ್ಷದವರಾಗಿದ್ದು, 5.5 ಅಡಿ ಎತ್ತರವಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

