ಹಳೇ ಮೂಡಿಗೆರೆ ಗ್ರಾಪಂಗೆ ತಾಪಂ ಅಧ್ಯಕ್ಷರ ಭೇಟಿ
ಮೂಡಿಗೆರೆ: ತಾಲೂಕಿನ ಹಳೆ ಮೂಡಿಗೆರೆ ಗ್ರಾಪಂ ವ್ಯಾಪ್ತಿಯ ಆದರ್ಶ ನಗರದಲ್ಲಿ ಮೂಲ ಸೌಲಭ್ಯಗಳ ಬಗ್ಗೆ ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆದರ್ಶ ನಗರದ ನಿವಾಸಿ ಅರುಣ್ ಕುಮಾರ್ ಮಾತನಾಡಿ, ನೂತನ ಮನೆಗಳು ನಿರ್ಮಾಣಗೊಂಡಿದ್ದು, ಕಂದಾಯವನ್ನು ಹಳೇ ಮೂಡಿಗೆರೆ ಗ್ರಾಪಂಗೆ ಕಟ್ಟಲಾಗುತ್ತಿದೆ.
ಆದರೆ ಈವರೆಗೂ ಗ್ರಾಪಂನಿಂದ ವಿದ್ಯುತ್, ಕುಡಿಯುವ ನೀರು, ಚರಂಡಿ ಹಾಗೂ ರಸ್ತೆ ನಿರ್ಮಾಣ ಸೇರಿದಂತೆ ಯಾವುದೇ ಮೂಲ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿದರು.
ಶಾಲೆಗೆ ಹೋಗುವ ಮಕ್ಕಳು ಕೆಸರಿನಲ್ಲಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ.
ಮೂಲ ಸೌಕರ್ಯ ನೀಡದ ಗ್ರಾಪಂ ಈವರೆಗೆ ಕಟ್ಟಿಸಿಕೊಂಡ ಕಂದಾಯ ಮರುಪಾವತಿ ಮಾಡಲಿ ಎಂದು ತಾಪಂ ಅಧ್ಯಕ್ಷರಿಗೆ ಒತ್ತಾಯಿಸಿದರು.
ಗ್ರಾಪಂ ಪಿಡಿಓಗೆ ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ ದೂರವಾಣಿ ಮೂಲಕ ಮಾತನಾಡಿ, ಇಲ್ಲಿನ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕು ಎಂದು ಸೂಚಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿ, ಇಲ್ಲಿನ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕು ಎಂದು ಸೂಚಿಸಿದರು. ಬಳಿಕ ಗ್ರಾಮ ಮಳೆಗಾಲ ಆರಂಭಗೊಂಡಿದ್ದರಿಂದ ರಸ್ತೆ ಕಾಮಗಾರಿ ನಡೆಸಲು ಸಾಧ್ಯವಿಲ್ಲ.
ತಾತ್ಕಾಲಿಕ ವ್ಯವಸ್ಥೆ ಕಲ್ಪಸಿಕೊಡಲಾಗುವುದು. ಚರಂಡಿ ನಿರ್ಮಾಣಕ್ಕಾಗಿ ಸಂಬಂಧಿಸಿದವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಗ್ರಾಮಸ್ಥರಾದ ಶಬ್ಬೀರ್, ವೆಂಕಟಯ್ಯ, ಉಸ್ಮಾನ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

