ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಕಡೂರು: ಇಲ್ಲಿನ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಮತು ಶ್ರೀರಾವ್ ಬಹದ್ದೂರ್ ಧರ್ಮ ಪ್ರವರ್ತಕರು, ಗುಬ್ಬಿ ತೋಟದಪ್ಪ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಇವರ ಸಹಯೋಗದಲ್ಲಿ ಕಡೂರು ಪಟ್ಟಣದಲ್ಲಿ ನಡೆಸಲಾಗುತ್ತಿರುವ ವೀರಶೈವ ಹೆಣ್ಣು ಮಕ್ಕಳಿಗೆ ಉಚಿತ ಪ್ರಸಾದ ನಿಲಯದ ಎರಡನೇ ವರ್ಷದ ಪ್ರವೇಶ ಪ್ರಾರಂಭವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಯುಸಿ, ಬಿ.ಎ. ಬಿ ಎಸ್ಸಿ, ಬಿ.ಕಾಂ., ಎಂ.ಎ., ಎಂ.ಕಾಂ., ಎಂ.ಎಸ್ಸಿ. ಇನ್ನಿತರ ತಾಂತ್ರಿಕ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳಿಗೆ ಶೇ.70 ಕ್ಕಿಂತ ಹೆಚ್ಚಿನ ಅಂಕ ಪಡೆದವರು ಕನಿಷ್ಠ 20 ಕಿ.ಮೀ. ದೂರದಿಂದ ಬರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸ್ವೀಕರಿಸಲು ಜೂ.15 ಕಡೆ ದಿನ.
ಅರ್ಜಿ ದೊರೆಯುವ ಸ್ಥಳ ವೀರಶೈವ ಕ್ಷೇಮಾಭಿವೃದ್ಧಿ ಸಂಘ, ಕಡೂರು, ವಿಆರ್ಎಲ್ ಲಾರಿ ಆಫೀಸ್ ಮೇಲ್ಭಾಗ, ಐ.ಎನ್. ಜಿ. ವೈಶ್ಯ ಬ್ಯಾಂಕ್ ಎದುರು, ಕೆ.ಎಂ. ರಸ್ತೆ ಕಡೂರು ಚಿಕ್ಕಮಗಳೂರು ಜಿಲ್ಲೆ.
ವಿವರಗಳಿಗೆ ಮೊ. 9449157704, 9449242717 ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

