ಚಿಕ್ಕಮಗಳೂರು

ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಬೇಡ: ಕಂಬಾರ

Published On :

ಚಿಕ್ಕಮಗಳೂರು: ಸರ್ಕಾರಗಳು ಬದಲಾದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನು ಬದಲಾವಣೆ ಮಾಡುವುದು ಸರಿಯಲ್ಲ. ಮಂತ್ರಿಗಳ ಮರ್ಜಿಗೆ ಒಳಗಾಗಿ ಅಧ್ಯಕ್ಷರನ್ನು ಆಗಾಗ ಬದಲಾಯಿಸುವುದನ್ನು ಕೈಬಿಡಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಬದಲಾವಣೆ ಮಾಡಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರನ್ನು ಬದಲಾವಣೆ ಮಾಡಲಾಗುತ್ತಿದೆ. ನೂತನ ಮುಖ್ಯಮಂತ್ರಿಗಳಿಗೆ ಅವರು ಇಷ್ಟವಾದರೆ ಮುಂದುವರೆಸಬಹುದು. ಇಲ್ಲವಾದರೆ ಬದಲಾವಣೆ ಮಾಡಬಹುದು. ಈ ಕ್ರಮ ಸರಿಯಲ್ಲ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ರಾಮಕೃಷ್ಣ ಹೆಗಡೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನು ಮುಂದುವರೆಸುವಂತೆ ಒತ್ತಾಯಿಸಿದ್ದೇವು. ಅದಕ್ಕೆ ಅವರು ಸ್ಪಂದಿಸಿ ಅಧ್ಯಕ್ಷರನ್ನು ಮುಂದಿನ ಅವಧಿವರೆಗೆ ಮುಂದುವರೆಸಿದ್ದರು.
ಸ್ವಾಯತ್ತತೆ ಸಂಸ್ಥೆಯಾಗಿಸಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಸಂಸ್ಥೆಯಾದರೂ ಇದು, ತನ್ನಪಾಡಿಗೆ ಕೆಲಸ ಮಾಡಲು ಸ್ವಾಯತ್ತತೆ ನೀಡಬೇಕು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕ ನಂತರ ಕನ್ನಡ ಭಾಷೆಯ ಬೆಳವಣಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದ ತಕ್ಷಣ ಬುದ್ಧಿವಂತ ಸಂಸ್ಥೆಗಳಾದ ವಿಶ್ವವಿದ್ಯಾನಿಲಯಗಳಿಂದ ಸಲಹೆ ಪಡೆಯಲಾಯಿತು. ಅವುಗಳು ಹೇಳಿದಂತೆ ಕೆಲವು ಪುಸ್ತಕಗಳನ್ನು ಮುದ್ರಣ ಮಾಡಿಸಲಾಯಿತು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.