ಚಿಕ್ಕಮಗಳೂರು

10ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Published On :

ಚಿಕ್ಕಮಗಳೂರು: ನಗರದಲ್ಲಿ ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೇ ತಾಲೂಕು ಕಚೇರಿಯಿಂದ ಜನಜಾಗೃತಿ ಜಾಥಾ ಹೊರಡಲಿದೆ. ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾಕ್ಷರತಾ ಪ್ರೇರಕರು, ಸ್ತ್ರೀ ಶಕ್ತಿ ಸಂಘಟನೆಗಳು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲಾ ಆಟದ ಮೈದಾನದಲ್ಲಿ ಬಾಲ ಕಾರ್ಮಿಕ ವಿರೋಧಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಭೆಯಲ್ಲಿ ತಿಳಿಸಿದರು.
ಸಹಾಯಕ ಕಾರ್ಮಿಕ ಆಯುಕ್ತೆ ಶ್ರೀವಳ್ಳಿ ಮಾತನಾಡಿ, ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಸಪ್ತಾಹವಾಗಿ ಆಚರಿಸಲಾಗುತ್ತದೆ. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿದರು. ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಸುಬ್ಬರಾವ್, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಡಾ. ಜಗದೀಶ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.