ವಿಕಲಚೇತನರಿಂದ ಅರ್ಜಿ ಆಹ್ವಾನ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.10
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಉದ್ಯೋಗಸ್ಥ ವಿಕಲಚೇತನ ಮಹಿಳೆಯರು, 5ನೇ ತರಗತಿ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಟೈಲರಿಂಗ್, ಟೈಪಿಂಗ್, ಕಂಪ್ಯೂಟರ್ ಇತ್ಯಾದಿ ವೃತ್ತಿ ತರಬೇತಿ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿನಿಯರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಮಾಹಿತಿಗಾಗಿ ಉದ್ಯೋಗಸ್ಥರ ಅಂಗವಿಕಲರ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯ, ಬಿಎಸ್ಎನ್ಎಲ್, ಕಚೇರಿ ಹಿಂಭಾಗ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಶೃಂಗೇರಿಯಲ್ಲಿ ಸಾಧಾರಣ ಮಳೆ
ಶೃಂಗೇರಿ: ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆ ಬಿದ್ದಿದೆ.
ಭಾನುವಾರ ಬಿಸಿಲಿನ ವಾತಾವರಣವಿತ್ತು. ಸೋಮವಾರ ಮಧ್ಯಾಹ್ನ ದವರೆಗೆ ಬಿಸಿಲು, ತುಂತುರು ಮಳೆಯ ವಾತಾವರಣವಿದ್ದು ಸಂಜೆ ಸಾಧಾರಣ ಮಳೆಯಾಗಿದೆ. ಈಗಾಗಲೇ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಬತ್ತ ನಾಟಿಗೆ ಸಸಿಮುಡಿ ಕೆಲಸ ಆರಂಭವಾಗಿದ್ದ ಅಗತ್ಯ ಮಳೆಯ ಅವಶ್ಯಕತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

