ಉಚಿತ ಗಣಕ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
ಕ.ಪ್ರ.ವಾರ್ತೆ ತರೀಕೆರೆ ಜೂ.10 ಕರ್ನಾಟಕ ಸರ್ಕಾರ ತಾಂತ್ರಿಕ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಹಿಂದುಳಿದ ತಾಲೂಕುಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತ ಗಣಕ ಯಂತ್ರದ ತರಬೇತಿ ನೀಡಲು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿ.ಇವರ ಮುಖಾಂತರ ಪ್ರಾಯೋಜಿಸಿ ತರಬೇತಿ ನೀಡುತ್ತಿದ್ದು, ಅರ್ಜಿಗಳನ್ನು ಆಹ್ವಾಸಿಸಲಾಗಿದೆ, ಅರ್ಹ ಅಭ್ಯರ್ಥಿಗಳು ಸ್ಥಳೀಯವಾಗಿ ತಿಳಿಸಿರುವ ಕಿಯೋನಿಕ್ಸ್ ಯುವ.ಕಾಂ (ಸುಮುಖ ಇನ್ಪೋಟೆಕ್) ಬಸವೇಶ್ವರ ಬೀದಿ ತರೀಕೆರೆ ಮೊ-9900666114, ಕಿಯೋನಿಕಸ್ ಸಂಸ್ಥೆಗಳಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅರ್ಜಿ ಪಡೆದ ಕಿಯೋನಿಕ್ಸ್ ಸಂಸ್ಥೆಗಳಲ್ಲಿ ಸಲ್ಲಿಸಲು ತಿಳಿಸಲಾಗಿದೆ.
ಎಸ್ಎಸ್ಎಲ್ಸಿ ಪಾಸಾಗಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆರಿಟ್ಗೆ ಅನುಗುಣವಾಗಿ ಕರ್ನಾಟಕ ಸರ್ಕಾರ ನಿಗಧಿ ಪಡಿಸಿದ ರೋಸ್ಟರ್ ಪದ್ದತಿಯ ಅನುಗುಣವಾಗಿ ನೆಡಯಲಿದೆ. ಹೆಚ್ಚಿನ ಅಂಕ ಪಡೆದವರಿಗೆ ಮೊದಲ ಆದ್ಯತೆ. ಅರ್ಜಿ ಪಡೆಯಲು ಕೊನೆಯ ದಿನಾಂಕ 15-06-2013 ಮತ್ತು 25-06-2913 ರ ಒಳಗೆ ಅರ್ಜಿ ಸಲ್ಲಿಸಲು ಸುಮುಖ ಇನ್ಪೋಟೆಕ್ಸ ಸುನೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

