ಚಿಕ್ಕಮಗಳೂರು

ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಮೂಡಿಗೆರೆ: ಪಟ್ಟಣದ ಕೆ.ಎಂ. ರಸ್ತೆ ಅಗಲೀಕರಣ ಮಾಡಲು ಅಧಿಕಾರಿಗಳು ಹಾಗೂ ರಾಜಕಾರಣಿಗಳು ಮೀನಾ ಮೇಷ ಏಣಿಸುತ್ತಿದ್ದು. ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಸಾರ್ವಜನಿಕರೊಂದಿಗೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪಟ್ಟಣ ಹೋರಾಟ ಸಮಿತಿಯ ಅಧ್ಯಕ್ಷ ರವಿಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಕೆ.ಎಂ. ರಸ್ತೆ ಬಹಳ ಇಕ್ಕಟ್ಟಿನಿಂದ ಕೂಡಿದ್ದಾಗಿದ್ದು. ಮತ್ತು ಕೆಲವು ಜನ ಪ್ರತಿನಿಧಿಗಳು ಚರಂಡಿಯ ಮೇಲೆ ಮನೆಗಳನ್ನು ನಿರ್ಮಿಸಿಕೊಂಡು ಆರ್‌ಸಿಸಿಯ ನೀರನ್ನು ರಸ್ತೆಗೆ ಬಿಡುವುದರ ಮೂಲಕ ಸಾರ್ವಜನಿಕರಿಗೆ ಉಪದ್ರ ನೀಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಕೆ.ಎಂ.ರಸ್ತೆ ಅಗಲೀಕರಣದ ವಿಚಾರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತುರ್ತುಸಭೆ ನಡೆಸಿ. ರಸ್ತೆಯ ಮಧ್ಯದಿಂದ 45, 45, 90 ಅಡಿಗೆ ಅಗಲೀಕರಣ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದರು. ಆದರೆ ನಿರ್ಣಯ ನಿರ್ಣಯವಾಗಿಯೇ ಉಳಿದಿದ್ದು ಕಾರ್ಯ ರೂಪಕ್ಕೆ ಬಂದಿಲ್ಲ.
ನೂತನ ಶಾಸಕ ಬಿ.ಬಿ. ನಿಂಗಯ್ಯ ಅವರು ರಸ್ತೆ ಅಗಲೀ ಕರಣದ ಬಗ್ಗೆ ಹೆಚ್ಚು ಒತ್ತು ನೀಡುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.