ಚಿಕ್ಕಮಗಳೂರು

ಬಿಜೆಪಿ ಸಂಘಟನೆ ಪುನಾರಚನೆ

Published On :

ಶಿವಮೊಗ್ಗ: ವಿಧಾನಸಭಾ ಚುನಾವಣೆ ಸೋಲಿನ ಅವಲೋಕನ ಮತ್ತು ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಇಟ್ಟುಕೊಂಡು ಸಂಘಟನಾತ್ಮಕ ಪುನಾರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.
 ಈ ಪ್ರಕ್ರಿಯೆ ಪೂರ್ವ ತಯಾರಿಗಾಗಿ ಬಿಜೆಪಿ ಜಿಲ್ಲಾ ಸಮಿತಿ ಸಭೆ ಜೂನ್ 13ರಂದು ಬೆಳಿಗ್ಗೆ 10.30ಕ್ಕೆ  ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದ್ದು, ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ರಾಜ್ಯದಿಂದ ಶಿವಮೊಗ್ಗ ಜಿಲ್ಲೆಗೆ ನಿಯುಕ್ತಿಗೊಂಡಿರುವ ಶಾಸಕ ಡಿ.ಎನ್. ಜೀವರಾಜ್ ಹಾಗೂ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದು, ಮಾರ್ಗದರ್ಶನ ಮಾಡಲಿದ್ದಾರೆ.
 ಸಭೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು, ರಾಜ್ಯ ಸಮಿತಿ, ರಾಷ್ಟ್ರೀಯ ಪರಿಷತ್ ಸದಸ್ಯರು, ಮೋರ್ಚಾಗಳ ರಾಜ್ಯ ಪದಾಧಿಕಾರಿಗಳು ಹಾಗೂ ಸದಸ್ಯರು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾಗಳ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಜರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.