ಚಿಕ್ಕಮಗಳೂರು

ಬಸ್ ವ್ಯವಸ್ಥೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಕೊಪ್ಪ  ಜೂ.12
ಬಿಲಗದ್ದೆ, ದಾಸನಕೊಡಿಗೆ ಮಾರ್ಗವಾಗಿ ಹರಿಹರಪುರಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಎಬಿವಿಪಿ ಕಾರ್ಯಕರ್ತರು ಹರಿಹರಪುರ ಬಳಿಯ ದೇವರಮನೆ ಮುಖ್ಯ ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
   ತಾಲೂಕಿನ ಹರಿಹರಪುರ ಹೋಬಳಿಯ ಬಿಲಗದ್ದೆ, ದಾಸನಕೊಡಿಗೆ ಮಾರ್ಗವಾಗಿ ಹರಿಹರಪುರಕ್ಕೆ ಬರಲು ಬಸ್ಸಿನ ವ್ಯವಸ್ಥೆ ಇಲ್ಲದೇ ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪರದಾಡುವಂತಾಗಿದೆ. ಸುಮಾರು 10-12 ಕಿ.ಮೀ ದೂರವಿದ್ದು, ನಡುವೆ 8ರಿಂದ10 ಹಳ್ಳಿಗಳಿವೆ. ಪ್ರತಿದಿನ ಒಂದು ಬಸ್ಸಿನ ಸಂಚಾರವಿತ್ತು.
 ದೀಢರನೇ ಬಸ್ಸು ವ್ಯವಸ್ಥೆ ರದ್ದುಗೊಳಿಸಿದ್ದರಿಂದ ತೀವ್ರ ತೊಂದರೆಯಾಗುತ್ತಿರುವುದರಿಂದ ತಕ್ಷಣ ಪುನಃ ಬಸ್ಸಿನ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿದರು.
 ವಿಚಾರ ತಿಳಿದು ಜಿಪಂ ಸದಸ್ಯೆ ಸುಚಿತಾ ನರೇಂದ್ರ ಹಾಗೂ ಉಪತಹಸೀಲ್ದಾರ್ ನೋಬಾರ್ಟ್ ಡಿ,ಸೋಜಾ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ನಂತರ ಶ್ರೀಘ್ರದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯದರ್ಶಿ ಪುರುಷೋತ್ತಮ, ಕೂಸ್ಗಲ್ ಆತ್ಮಾನಂದ, ರಕ್ಷಿತ್, ಪುನೀತ್, ರೋಷನ್, ಶ್ರೀಜಿತ್ ಹಾಗೂ ಗ್ರಾಮಸ್ಥಾರಾದ ಶ್ರೀನಿವಾಸ್, ಕುಪ್ಪಳ್ಳಿ ರತ್ನಾಕರ್, ಸತೀಶ್, ರಮೇಶ್, ಸೇರಿದಂತೆ ಬಿಲಗದ್ದೆ, ಕುಪ್ಪಳ್ಳಿ, ಗೌರಿಗದ್ದೆ, ದಾಸನಕೊಡಿಗೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಅಸಾಧಾರಣ ಸೇವೆ ಸಲ್ಲಿಸಿದವರಿಂದ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5 ವರ್ಷ ಮೇಲ್ಪಟ್ಟು ಅಸಾಧಾರಣ ಸೇವೆ ಸಲ್ಲಿಸಿರುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ಹಾಗೂ ಬಹುಮಾನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದ ಗುಣಮಟ್ಟದ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯದಿನವಾಗಿರುತ್ತದೆ.
  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಿಂದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.