ಚಿಕ್ಕಮಗಳೂರು

ಇಂದಿನಿಂದ ಕಾರ್ಯಾಗಾರ

Published On :

ನರಸಿಂಹರಾಜಪುರ: ಮೈಸೂರಿನ ನಜೀರ್‌ಸಾಬ್ ತರಬೇತಿ ಸಂಸ್ಥೆಯಿಂದ ತಾಲೂಕಿನ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳಿಗೆ 3 ದಿನಗಳ ಆಡಳಿತಾತ್ಮಕ ತರಬೇತಿ ಕಾರ್ಯಗಾರವು ಜೂ.13ರ ಗುರುವಾರ ಬೆಳಗ್ಗೆ 11 ಗಂಟೆಗೆ ತಾಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಪಂ ಸಿಇಒ ವಿಜಯಕುಮಾರ್ ತಿಳಿಸಿದ್ದಾರೆ.
14ರಂದು ಶ್ರೀ ಪಾರ್ಶ್ವನಾಥ ಸ್ವಾಮಿಗೆ ಅಭಿಷೇಕ
ತರೀಕೆರೆ: ಸಮೀಪದ ಗುಳ್ಳದಮನೆ ಗ್ರಾಮದಲ್ಲಿ ಮಹೇಶ್ವರಪ್ಪ ಮತ್ತು ಗ್ರಾಮಸ್ಥರ ವತಿಯಿಂದ ಜೂ.14 ರಂದು ಶ್ರೀ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ಥಾಪಿಸಿರುವ 23ನೇ ತೀರ್ಥಂಕರರಾದ ಶ್ರೀ ಪಾರ್ಶ್ವನಾಥ ಸ್ವಾಮಿಯವರಿಗೆ 8ನೇ ವರ್ಷದ ಅಭಿಷೇಕ ಮತ್ತು ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ.
ಉಚಿತ ನೇತ್ರ ತಪಾಸಣಾ ಶಿಬಿರ
ತರೀಕೆರೆ: ಮಲೆನಾಡು ಅಡಕೆ ಮಾರಾಟ ಸಹಕಾರ ಸಂಘ ತರೀಕೆರೆ ಶಾಖೆ, ಶಂಕರ ಕಣ್ಣಿನ ಆಸ್ಪತ್ರೆ ಹರಕೆರೆ ವತಿಯಿಂದ ಬುಧವಾರ ಸಂಘದ ಕಾರ್ಯಾಲಯದಲ್ಲಿ ಸಂಘದ ಸದಸ್ಯರಿಗೆ ಹಾಗೂ ಕುಟುಂಬವರ್ಗದವರಿಗೆ 2 ದಿನಗಳ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಮ್ಯಾಮ್‌ಕೋಸ್ ನಿರ್ದೇಶಕ ಆರ್. ದೇವಾನಂದ್ ಮಾತನಾಡಿ, ಬಹಳ ವರ್ಷಗಳಿಂದ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಸಂಘದ ಸದಸ್ಯರು ಹಾಗೂ ಕುಟುಂಬವರ್ಗದವರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ತಿಳಿಸಿದರು. ಶಂಕರ ಕಣ್ಣಿನ ಆಸ್ಪತ್ರೆ ವೈದ್ಯ ಡಾ. ಸೋಮಶೇಖರ್, ಸಂಘದ ವ್ಯವಸ್ಥಾಪಕ ಸುರೇಶ್ ಮತ್ತಿತರರು ಇದ್ದರು.
ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತೆರವು
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ಮಾಡಿರುವಂತಹ 1496 ಪ್ರಕರಣಗಳಿದ್ದು, ಈ ಪೈಕಿ 10 ಎಕರೆ ಮೇಲ್ಪಟ್ಟು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸಲಾಗುತ್ತಿದೆ ಎಂದು ಡಿಎಫ್‌ಓ ಎಂ. ರವಿರಾಜ್ ನಾರಾಯಣ್ ಹೇಳಿದ್ದಾರೆ.  10 ಎಕರೆ ಮೇಲ್ಪಟ್ಟ 46 ಪ್ರಕರಣಗಳನ್ನು ಮೊದಲ ಹಂತದಲ್ಲಿ ತೆರವುಗೊಳಿಸಲಾಗುತ್ತಿದೆ. ನ್ಯಾಯಾಲಯದ ಆದೇಶದ ಪ್ರಕಾರ ಮೇ ತಿಂಗಳಿನಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ನಮ್ಮದೆ ಭೂಮಿ ಎಂದು ಸಾಬೀತುಪಡಿಸಲು ಆಗದೆ ಇರುವವರ ಒತ್ತುವರಿ ಭೂಮಿಯನ್ನು ಖುಲ್ಲಾ ಮಾಡಲಾಗುತ್ತಿದೆ ಎಂದ ಅವರು, ಸದ್ಯ ಒಂದು ವಾರಗಳ ಕಾಲ ಈ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.